ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾನ್ಸರ್ ಪತ್ತೆ: ಸಾರ್ವಜನಿಕವಾಗಿ ಕಾಣಿಸಿಕೊಂಡ ಬ್ರಿಟನ್ ರಾಜ 3ನೇ ಚಾರ್ಲ್ಸ್

ಬ್ರಿಟನ್ ರಾಜ 3ನೇ ಚಾರ್ಲ್ಸ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಬಕಿಂಗ್ ಹ್ಯಾಮ್ ಅರಮನೆ ನಿನ್ನೆಯಷ್ಟೇ ಸಾರ್ವಜನಿಕರಿಗೆ ತಿಳಿಸಿತ್ತು.
Published 7 ಫೆಬ್ರುವರಿ 2024, 5:35 IST
Last Updated 7 ಫೆಬ್ರುವರಿ 2024, 5:35 IST
ಅಕ್ಷರ ಗಾತ್ರ

ಲಂಡನ್: ಬ್ರಿಟನ್ ರಾಜ 3ನೇ ಚಾರ್ಲ್ಸ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಎಂದು ಬಕಿಂಗ್ ಹ್ಯಾಮ್ ಅರಮನೆ ನಿನ್ನೆಯಷ್ಟೇ ಸಾರ್ವಜನಿಕರಿಗೆ ತಿಳಿಸಿತ್ತು.

ಇಂದು 3ನೇ ಚಾರ್ಲ್ಸ್ ಅವರು ಬಕಿಂಗ್ ಹ್ಯಾಮ್ ಅರಮನೆಯ ನಿವಾಸದಿಂದ ಕಾರಿನಲ್ಲಿ ನಗುಮೊಗದಿಂದಲೇ ಹೊರಬಂದಿದ್ದಾರೆ.

ಕ್ಯಾನ್ಸರ್ ಕಾಣಿಸಿಕೊಂಡ ನಂತರ ಅವರು ಸಾರ್ವಜನಿಕವಾಗಿ ಇದೇ ಮೊದಲ ಬಾರಿಗೆ ಕಾಣಿಸಿಕೊಂಡರು ಎಂದು ರಾಯಿಟರ್ಸ್ ವರದಿ ಮಾಡಿದೆ. ಅವರು ಕ್ಯಾನ್ಸರ್ ಕುರಿತು ತಜ್ಞ ವೈದ್ಯರ ಸಲಹೆ ಪಡೆಯಲು ಬೇರೊಂದು ಸ್ಥಳಕ್ಕೆ ತೆರಳಿದರು ಎನ್ನಲಾಗಿದೆ ಎಂದು ತಿಳಿಸಿದೆ.

ಚಾರ್ಲ್ಸ್‌ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಹೀಗಾಗಿ ಅವರು ವೈದ್ಯರ ಸಲಹೆಯ ಮೇರೆಗೆ ಸಾರ್ವಜನಿಕವಾಗಿ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಆದರೆ ಖಾಸಗಿ ಸಭೆ ಸೇರಿದಂತೆ ಅಧಿಕೃತ ಕೆಲಸವನ್ನು ಮುಂದುವರಿಸುತ್ತಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿತ್ತು.

ಚಾರ್ಲ್ಸ್ ಕ್ಯಾನ್ಸರ್‌ನಿಂದ ಬಳಲುತ್ತಿರುವ ವಿಷಯ ತಿಳಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್, ಪ್ರಧಾನಿ ನರೇಂದ್ರ ಮೋದಿ ಅವರು, ರಾಜ ಚಾರ್ಲ್ಸ್ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದರು.

'ಚಾರ್ಲ್ಸ್ ಅವರು ಪೂರ್ಣ ಶಕ್ತಿಯೊಂದಿಗೆ ಮರಳುವುದರಲ್ಲಿ ನನಗೆ ಯಾವುದೇ ಸಂದೇಹವಿಲ್ಲ. ಇಡೀ ದೇಶ ಅವರು ಶೀಘ್ರ ಗುಣಮುಖರಾಗುವಂತೆ ಹಾರೈಸುತ್ತದೆ' ಎಂದು ರಿಷಿ ಸುನಕ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT