ಮಾಸ್ಕೊ: ನವದೆಹಲಿಯಲ್ಲಿ ಸೆಪ್ಟೆಂಬರ್ ತಿಂಗಳು ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ವ್ಯಕ್ತಿಗತವಾಗಿ ಹಾಜರಾಗುವುದಿಲ್ಲ ಎಂದು ರಷ್ಯಾ ಸರ್ಕಾರ ಶುಕ್ರವಾರ ತಿಳಿಸಿದೆ.
ಉಕ್ರೇನ್‌ನಲ್ಲಿ ನಡೆಯುತ್ತಿರುವ ವಿಶೇಷ ಸೇನಾ ಕಾರ್ಯಾಚರಣೆಯತ್ತ ರಷ್ಯಾ ಪ್ರಸ್ತುತ ಗಮನ ಕೇಂದ್ರೀಕರಿಸಿದೆ. ಅಲ್ಲದೆ, ಬಿಡುವಿಲ್ಲದ ಕಾರ್ಯಕ್ರಮಗಳಿವೆ ಎಂದು ವ್ಯಕ್ತಿಗತ ಗೈರುಹಾಜರಿಗೆ ಕಾರಣ ನೀಡಿದೆ.
ಪುಟಿನ್ ಅವರ ಭಾಗವಹಿಸುವಿಕೆಯು ಯಾವ ಸ್ವರೂಪದಲ್ಲಿ ಇರಬೇಕು ಎಂಬುದನ್ನು ನಂತರ ತೀರ್ಮಾನಿಸಲಾಗುವುದು ಎಂದು ಪುಟಿನ್ ಅವರ ವಕ್ತಾರ ಡಿಮಿಟ್ರಿ ಪೆಸ್ಕೊವ್ ತಿಳಿಸಿದ್ದಾರೆ.
ಜಿ20 ಶೃಂಗಸಭೆಯು ಸೆ. 9 ರಿಂದ 10ರವರೆಗೆ ನವದೆಹಲಿಯಲ್ಲಿ ನಡೆಯಲಿದೆ. ಡಿಸೆಂಬರ್ 1, 2022ರಿಂದ ಜಿ20 ಶೃಂಗದ ಅಧ್ಯಕ್ಷ ಸ್ಥಾನದಲ್ಲಿರುವ ಭಾರತ ಈ ಸಭೆಯ ಆತಿಥ್ಯವನ್ನು ವಹಿಸಿಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.