ಕುಂದಾಪುರ: ‘ಇರಾನ್, ಇಸ್ರೇಲ್, ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮ ಭಾರತಕ್ಕೂ ತಟ್ಟಿದೆ. ಇದರಿಂದ ಗ್ಯಾಸ್ ಸಿಲಿಂಡರ್ ಸರಬರಾಜಿನಲ್ಲಿ ಕೊರತೆಯಾಗುತ್ತಿದ್ದು, ಬೆಲೆ ಏರಿಕೆಯೂ ಆಗುತ್ತಿದೆ. ಜಗತ್ತಿಗೆ, ಜನರಿಗೆ ಅನಾಹುತಕಾರಿಯಾಗಿರುವ ಯುದ್ಧವನ್ನು ವಿರೋಧಿಸಬೇಕು’ ಎಂದು ಸಿಪಿಎಂ ಜಿಲ್ಲಾ ಘಟಕದ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.

ಇರಾನ್, ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧವನ್ನು ವಿರೋಧಿಸಿ ಸಿಪಿಎಂ ತಾಲ್ಲೂಕು ಘಟಕದ ವತಿಯಿಂದ ಇಲ್ಲಿನ ಶಾಸ್ತ್ರಿ ಸರ್ಕಲ್ ಬಳಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಎಚ್. ನರಸಿಂಹ ಮಾತನಾಡಿ, ‘ಯುದ್ದವು ಪರೋಕ್ಷವಾಗಿ ಎಲ್ಲದರ ಮೇಲೂ ಪರಿಣಾಮ ಬೀರಲಿದೆ. ದೇಶದ ಆಡಳಿತ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ಯುದ್ಧವನ್ನು ಖಂಡಿಸುವ ಧೈರ್ಯವನ್ನು ನಮ್ಮ ನೇತಾರರು ಮಾಡುತ್ತಿಲ್ಲ’ ಎಂದು ಆರೋಪಿಸಿದರು.

ನಿವೃತ್ತ ಉಪನ್ಯಾಸಕ ಹಯವದನ ಮೂಡುಸಗ್ರಿ, ಸಿಪಿಎಂ ಜಿಲ್ಲಾ ಸಮಿತಿ ಸದಸ್ಯರಾದ ಸುರೇಂದ್ರ ಎಚ್, ಶೀಲಾವತಿ, ಬಲ್ಕೀಸ್, ತಾಲ್ಲೂಕು ಸಮಿತಿ ಸದಸ್ಯರಾದ ಕೆ. ಶಂಕರ್, ಮಹಾಬಲ ವಡೇರಹೋಬಳಿ, ಸಂತೋಷ್ ಹೆಮ್ಮಾಡಿ, ಚಂದ್ರ ಪೂಜಾರಿ, ಡಿ. ಲಕ್ಷ್ಮಣ, ಚಿಕ್ಕ ಮೊಗವೀರ, ಕಾರ್ಮಿಕ ಮುಖಂಡರಾದ ಪ್ರಕಾಶ್ ಕೋಣಿ, ರಮೇಶ್ ವಿ., ಚಂದ್ರ ವಿ., ರೆಹಮಾನ್ ಭಾಗವಹಿಸಿದ್ದರು.

ಸಿಪಿಎಂ ಸದಸ್ಯ ರಾಜು ದೇವಾಡಿಗ ಸ್ವಾಗತಿಸಿದರು. ತಾಲ್ಲೂಕು ಸಮಿತಿ ಕಾರ್ಯದರ್ಶಿ ಚಂದ್ರಶೇಖರ ವಿ. ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-28-1492908029

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.