ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯವ್ಯ ಪಾಕಿಸ್ತಾನದಲ್ಲಿ ನೆಲಬಾಂಬ್ ಸ್ಫೋಟ: ಮೂವರು ಮಕ್ಕಳು ಸಾವು

Published 5 ಜನವರಿ 2024, 9:28 IST
Last Updated 5 ಜನವರಿ 2024, 9:28 IST
ಅಕ್ಷರ ಗಾತ್ರ

ಪೇಶಾವರ: ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಮೇಕೆ ಮೇಯಿಸುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ ಮೂವರು ಮಕ್ಕಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆಫ್ಗಾನಿಸ್ತಾನದ ಗಡಿಯಲ್ಲಿರುವ ಉತ್ತರ ವಜೀರಿಸ್ತಾನ್ ಬುಡಕಟ್ಟು ಜಿಲ್ಲೆಯ ಮೀರ್ ಅಲಿ ತೆಹ್ಸಿಲ್‌ನಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

5 ರಿಂದ 15 ವರ್ಷದೊಳಗಿನ ಕುರುಬ ಸಮುದಾಯದ ಮೂವರು ಮಕ್ಕಳು ಖಜೋರಿ ಪ್ರದೇಶದ ಹೊಲಗಳಲ್ಲಿ ಮೇಕೆಗಳನ್ನು ಮೇಯಿಸುತ್ತಿದ್ದರು. ಅವರಲ್ಲಿ ಒಬ್ಬ ನೆಲಬಾಂಬ್‌ ಮೇಲೆ ಕಾಲಿಟ್ಟಿದ್ದು, ಅದು ಸ್ಪೋಟಗೊಂಡಿದೆ.

ಸದ್ಯ ಘಟನೆಯ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT