ಲಾಹೋರ್: ಅಪರಿಚಿತ ವ್ಯಕ್ತಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಲಷ್ಕರ್–ಎ–ತಯಬಾ(ಎಲ್ಇಟಿ) ಭಯೋತ್ಪಾದಕ ಸಂಘಟನೆಯ ಸಹಸಂಸ್ಥಾಪಕ ಅಮೀರ್ ಹಂಜಾ ಗಾಯಗೊಂಡಿದ್ದಾನೆ.

ಲಷ್ಕರ್–ಎ–ತಯಬಾ ಮುಖ್ಯಸ್ಥ ಹಫೀಜ್ ಸಯೀದ್ ಬಳಿಕ ಉಗ್ರ ಹಂಜಾ ಸಂಘಟನೆಯ ಪ್ರಮುಖ ನಾಯಕನಾಗಿದ್ದಾನೆ.

ಗೃಹ ಸಚಿವ ಮೊಹ್ಸಿನ್ ನಕ್ವಿ ಒಡೆತನದ ಖಾಸಗಿ ವಾಹಿನಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನೀಡಲು ನಿರೂಪಕ, ನಿವೃತ್ತ ನ್ಯಾಯಮೂರ್ತಿ ನಜೀರ್ ಅಹಮದ್ ಘಾಝಿ ಮತ್ತು ಅಮೀರ್ ಹಂಜಾ ವಾಹಿನಿಗೆ ಸೇರಿದ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದಾರೆ.

‘ದಾಳಿಯಿಂದಾಗಿ ಹಂಜಾಗೆ ಗಾಯಗಳಾಗಿವೆ ಮತ್ತು ಘಾಝಿಗೆ ಯಾವುದೇ ತೊಂದರೆಗಳಾಗಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.