ಬೈರೂತ್: ಲೆಬನಾನ್ ನಾಗರಿಕ ವಿಮಾನಯಾನ ಪ್ರಾಧಿಕಾರ ವಿಮಾನಗಳಲ್ಲಿ ಪೇಜರ್ ಹಾಗೂ ವಾಕಿಟಾಕಿಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಿದೆ.
ಲೆಬನಾನ್ ಹಾಗೂ ಸಿರಿಯಾದಲ್ಲಿ ಪೇಜರ್ ಹಾಗೂ ವಾಕಿಟಾಕಿಗಳು ಸ್ಫೋಟಗೊಂಡು 12 ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ. 3,000ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಈ ಘಟನೆಯ ಬೆನ್ನಲ್ಲೇ ಲೆಬನಾನ್ ಪೇಜರ್‌ಗಳ ಬಳಕೆಯನ್ನು ನಿಷೇಧಿಸಿದೆ.
ಬೈರೂತ್‌ನ ಹರಿರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡುವ ವಿಮಾನಗಳಲ್ಲಿ ಪೇಜರ್, ವಾಕಿಟಾಕಿಗಳನ್ನು ಕೊಂಡೊಯ್ಯುವಂತಿಲ್ಲ ಎಂದು ಆದೇಶಿಸಿದೆ.
ಲೆಬನಾನ್‌ನಲ್ಲಿ ಪೇಜರ್‌ಗಳ ಸ್ಪೋಟದ ಬೆನ್ನಲ್ಲೇ ಹಿಜ್ಬುಲ್ಲಾ ಸಂಘಟನೆ ಇಸ್ರೇಲ್ ಮೇಲೆ ವ್ಯಗ್ರವಾಗಿದ್ದು, ಪ್ರತಿ ದಾಳಿ ಆರಂಭಿಸಲು ಗುರುವಾರ ಸಿದ್ದತೆ ನಡೆಸಿತ್ತು.
ಲೆಬನಾನ್‌ನಲ್ಲಿ ಮಂಗಳವಾರ ಮತ್ತು ಬುಧವಾರ ಪೇಜರ್‌ಗಳು, ವಾಕಿ–ಟಾಕಿಗಳು ಮತ್ತು ಇತರ ಸಾಧನಗಳು ಸ್ಫೋಟಗೊಂಡು ಕನಿಷ್ಠ 20 ಮಂದಿ ಮೃತಪಟ್ಟದ್ದಾರೆ. ಸಹಸ್ರಾರು ಜನರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಈ ಸ್ಫೋಟಗಳಿಗೆ ಇಸ್ರೇಲ್ ಕಾರಣ ಎಂಬುದು ಹಿಜ್ಬುಲ್ಲಾದ ಆರೋಪವಾಗಿದೆ. ಅಲ್ಲದೆ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹಿಜ್ಬುಲ್ಲಾ ಶಪಥ ಕೂಡ ಮಾಡಿದೆ.