ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕದ ನೂತನ ಸರ್ಕಾರದೊಂದಿಗೆ ಕೆಲಸ ಮಾಡಲು ಉತ್ಸುಕರಾಗಿದ್ದೇವೆ: ಭಾರತೀಯ ರಾಯಭಾರಿ

Last Updated 27 ಜನವರಿ 2021, 6:30 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಭಾರತ ಮತ್ತು ಅಮೆರಿಕದ ಸಂಬಂಧವು ಒಂದೇ ರೀತಿಯ ಮೌಲ್ಯಗಳ ಮೇಲೆ ನಿರ್ಮಾಣವಾಗಿದೆ.ಜೋ ಬೈಡನ್‌ ನೇತೃತ್ವದ ಸರ್ಕಾರದೊಂದಿಗೆ ಕೆಲಸ ಮಾಡಲುಭಾರತ ಎದುರು ನೋಡುತ್ತಿದೆ ಎಂದು ಅಮೆರಿಕದಲ್ಲಿನ ಭಾರತದ ರಾಯಭಾರಿ ತರಂಜಿತ್‌ ಸಿಂಗ್‌ ಸಂಧು ಹೇಳಿದರು.

72ನೇ ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು,‘ ಭಾರತೀಯ– ಅಮೆರಿಕನ್‌ ಸಮುದಾಯವು ಅಮೆರಿಕದೊಂದಿಗಿನ ಭಾರತದ ಸಂಬಂಧದ ಆಧಾರ ಸ್ತಂಭ. ಭಾರತ ಮತ್ತು ಅಮೆರಿಕದ ಸಂಬಂಧವನ್ನು ಇನ್ನಷ್ಟು ಬಲಿಷ್ಠಗೊಳಿಸುವಲ್ಲಿ ಈ ಸಮುದಾಯವು ಪ್ರಮುಖ ಪಾತ್ರವಹಿಸಿದೆ’ ಎಂದು ಅವರು ಹೇಳಿದರು.

‘ಅಧ್ಯಕ್ಷ ಜೋ ಬೈಡನ್‌ ಮತ್ತು ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ನೇತೃತ್ವದ ನೂತನ ಸರ್ಕಾರದೊಂದಿಗೆ ಕೆಲಸ ಮಾಡಲು ನಾವು ಉತ್ಸುಕರಾಗಿದ್ದೇವೆ’ ಎಂದು ಅವರು ತಿಳಿಸಿದರು.

‘ಭಾರತ ಮತ್ತು ಅಮೆರಿಕವು ಪ್ರಜಾ‍ಪ್ರಭುತ್ವ, ಕಾನೂನು ಮತ್ತು ಬಹುತ್ವಗಳಂತಹ ಮೌಲ್ಯಗಳನ್ನು ಅನುಸರಿಸುತ್ತದೆ. ಇದೇ ಉಭಯ ರಾಷ್ಟ್ರಗಳ ಸಂಬಂಧದ ಅಡಿಪಾಯ. ಬಾಹ್ಯಾಕಾಶ, ನ್ಯಾನೊ ತಂತ್ರಜ್ಞಾನ, ಇಂಡೊ-ಪೆಸಿಫಿಕ್, ಹವಾಮಾನ ಬದಲಾವಣೆ, ಆರೋಗ್ಯ, ಶಿಕ್ಷಣ ಮತ್ತು ಐಟಿ ಕ್ಷೇತ್ರಗಳಲ್ಲಿ ಅಮೆರಿಕ ಮತ್ತು ಭಾರತದ ಸಹಭಾಗಿತ್ವವು ಕೇವಲ ಎರಡು ರಾಷ್ಟ್ರಗಳಿಗೆ ಮಾತ್ರವಲ್ಲದೇ ಇಡೀ ಜಗತ್ತಿಗೆ ಪ್ರಯೋಜನಕಾರಿಯಾಗಿದೆ’ ಎಂದು ಅವರು ಇದೇ ವೇಳೆ ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT