ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ದಿನಗಳ ಭಾರತ ಪ್ರವಾಸ ಕೈಗೊಂಡ ಮಾಲ್ದೀವ್ಸ್ ವಿದೇಶಾಂಗ ಸಚಿವ

Published 8 ಮೇ 2024, 15:26 IST
Last Updated 8 ಮೇ 2024, 15:26 IST
ಅಕ್ಷರ ಗಾತ್ರ

ಮಾಲೆ: ಮಾಲ್ದೀವ್ಸ್‌ನ ವಿದೇಶಾಂಗ ಸಚಿವ ಮೂಸಾ ಜಮೀರ್‌ ಅವರು ಬುಧವಾರದಿಂದ ಮೂರು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಈ ಅವಧಿಯಲ್ಲಿ ಅವರು ವಿದೇಶಾಂಗ ವ್ಯವಹಾರಗಳ ಸಚಿವ
ಎಸ್‌. ಜೈಶಂಕರ್‌ ಅವರನ್ನು ಭೇಟಿಯಾಗಲಿದ್ದು, ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ಮಾತುಕತೆ ನಡೆಸಲಿದ್ದಾರೆ.

ಮಾಲ್ದೀವ್ಸ್‌ ಮತ್ತು ಭಾರತದ ನಡುವಿನ ದೀರ್ಘಾಕಾಲದ ಪಾಲುದಾರಿಕೆ ಬಲಗೊಳಿಸುವ ಮತ್ತು ಇನ್ನಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಚೀನಾ ಪರ ಒಲವುಳ್ಳ ಅಲ್ಲಿನ ಅಧ್ಯಕ್ಷ ಮೊಹಮ್ಮದ್‌ ಮುಯಿಝು ಅವರು ಅಧಿಕಾರ ವಹಿಸಿಕೊಂಡು ಆರು ತಿಂಗಳಾಗಿದ್ದು, ಈ ಅವಧಿಯಲ್ಲಿ ಉಭಯ ದೇಶಗಳ ನಡುವಿನ ಸಂಬಂಧ ಹಳಸಿದೆ. ಈ ಸಂದರ್ಭದಲ್ಲಿ ಮಾಲ್ದೀವ್ಸ್‌ನ ಉನ್ನತ ಮಟ್ಟದ ಅಧಿಕಾರಿ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ವಿದೇಶಾಂಗ ಸಚಿವ ಜಮೀರ್‌ ಅವರು ಅಧಿಕಾರ ವಹಿಸಿಕೊಂಡ ಬಳಿಕ ಭಾರತಕ್ಕೆ ನೀಡುತ್ತಿರುವ ಮೊದಲ ಅಧಿಕೃತ ಭೇಟಿ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT