ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ ಮಾಜಿ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್‌ಗೆ ಬೆದರಿಕೆ ಪತ್ರ: ವ್ಯಕ್ತಿಗೆ ಜೈಲು

Published 1 ಮೇ 2023, 18:54 IST
Last Updated 1 ಮೇ 2023, 18:54 IST
ಅಕ್ಷರ ಗಾತ್ರ

ಲಂಡನ್‌: ಬ್ರಿಟನ್‌ನ ಮಾಜಿ ಗೃಹ ಕಾರ್ಯದರ್ಶಿ ಹಾಗೂ ಭಾರತ ಸಂಜಾತೆ ಪ್ರೀತಿ ಪಟೇಲ್ ಅವರಿಗೆ ಬೆದರಿಕೆ ಪತ್ರ ಕಳುಹಿಸಿದ್ದ ಆರೋಪದಲ್ಲಿ 65 ವರ್ಷದ ವ್ಯಕ್ತಿಯೊಬ್ಬರಿಗೆ ಐದು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

ಪೂನೀರಾಜ್ ಕನಕಯ್ಯ ಎಂಬುವವರಿಗೆ ಲಂಡನ್‌ನ ವೆಸ್ಟ್‌ಮಿನ್‌ಸ್ಟರ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.

ಕಳೆದ ವರ್ಷ ಜನವರಿ 22ರಂದು ಪ್ರೀತಿ ಪಟೇಲ್ ಅವರಿಗೆ ಬೆದರಿಕೆ ಪತ್ರ ಕಳುಹಿಸಲಾಗಿತ್ತು. ಆಗ ಅವರು ಗೃಹ ಕಾರ್ಯದರ್ಶಿಯಾಗಿದ್ದರು. ಕೈಬರಹದಲ್ಲಿದ್ದ ಪತ್ರವು ಪ್ರೀತಿ ಅವರ ಕಚೇರಿಯ ಸಿಬ್ಬಂದಿಗೆ ಲಭಿಸಿತ್ತು ಎಂದು ಮೂಲಗಳು ತಿಳಿಸಿವೆ.

ಪತ್ರವನ್ನು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಮೂಲಕ ಪತ್ರ ಬರೆದಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲಾಗಿದೆ ಎಂದು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT