ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ಯತ್ನ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ರ್ಯಾನ್ ವೆಸ್ಲಿ ರೂತ್ಗೆ ನ್ಯಾಯಾಲಯವು ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

2024ರ ಸೆಪ್ಟೆಂಬರ್ 15ರಂದು ಫ್ಲೋರಿಡಾದ ಗಾಲ್ಫ್ ಕೋರ್ಸ್ನಲ್ಲಿ ಆಡುತ್ತಿದ್ದ ರಿಪಬ್ಲಿಕನ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯೂ ಆಗಿದ್ದ ಟ್ರಂಪ್ ಅವರನ್ನು ಕೊಲ್ಲಲ್ಲು ರೂತ್ ಯತ್ನಿಸಿದ್ದನು. ಈ ಪ್ರಕರಣದಲ್ಲಿ ರೂತ್ ತಪ್ಪಿತಸ್ಥ ಎಂದು ಸಾಬೀತಾಗಿದೆ.

ಶಿಕ್ಷೆಯನ್ನು ಪ್ರಕಟಿಸಿರುವ ಜಿಲ್ಲಾ ನ್ಯಾಯಾಧೀಶೆ ಐಲೀನ್ ಕ್ಯಾನನ್, ‘ಪ್ರಮುಖ ಅಧ್ಯಕ್ಷೀಯ ಅಭ್ಯರ್ಥಿಯನ್ನು ಹತ್ಯೆ ಮಾಡಲು ಆರೋಪಿಯು ಹಲವು ತಿಂಗಳುಗಳಿಂದ ಸಂಚು ಮಾಡಿರುವುದು ವಿಚಾರಣೆ ವೇಳೆ ಕಂಡುಬಂದಿದೆ. ಆರೋಪಿಯು ದಾರಿಯಲ್ಲಿ ಸಿಕ್ಕ ಯಾರಾನ್ನಾದರೂ ಕೊಲ್ಲುವ ಇರಾದೆಯನ್ನು ಹೊಂದಿದ್ದನು. ತನ್ನ ಅಪರಾಧಕ್ಕೆ ಪಶ್ಚಾತ್ತಾಪವನ್ನು ವ್ಯಕ್ತಪಡಿಸಿಲ್ಲ’ ಎಂದು ಹೇಳಿದ್ದಾರೆ.

ಈ ಪ್ರಕರಣದ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ರೂತ್ ಪರ ವಕೀಲ ಮಾರ್ಟಿನ್ ರಾಸ್ ಹೇಳಿದ್ದಾರೆ.

ಈ ಘಟನೆಗೂ ಮುನ್ನ 2024 ಜುಲೈ 13 ರಂದು ಪೆನ್ಸಿಲ್ವೇನಿಯಾದ ಬಟ್ಲರ್ ನಗರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡುತ್ತಿದ್ದಾಗ ಟ್ರಂಪ್ ಮೇಲೆ ಗುಂಡಿನ ದಾಳಿ ನಡೆದಿತ್ತು. ದಾಳಿಯಲ್ಲಿ ಟ್ರಂಪ್ ಅವರ ಕಿವಿಗೆ ತೀವ್ರವಾಗಿ ಗಾಯವಾಗಿತ್ತು. ಬಂದೂಕುಧಾರಿ ಥಾಮಸ್ ಮ್ಯಾಥ್ಯೂ ಕ್ರೂಕ್ಸ್ನನ್ನು ಭದ್ರತಾ ಸಿಬ್ಬಂದಿ ಹತ್ಯೆಗೈದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.