ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಡನ್‌: ಕತ್ತಿಯಿಂದ ಐವರಿಗೆ ಇರಿತ

Published 30 ಏಪ್ರಿಲ್ 2024, 12:25 IST
Last Updated 30 ಏಪ್ರಿಲ್ 2024, 12:25 IST
ಅಕ್ಷರ ಗಾತ್ರ

ಲಂಡನ್‌: ಪೂರ್ವ ಲಂಡನ್‌ನ ಟ್ಯೂಬ್‌ ಸ್ಟೇಷನ್‌ ಸಮೀಪ ಖಡ್ಗ (ಕತ್ತಿ) ಹಿಡಿದು ಬಂದ ವ್ಯಕ್ತಿಯೊಬ್ಬ ಮಂಗಳವಾರ ಇಬ್ಬರು ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಕನಿಷ್ಠ ಐವರಿಗೆ ಇರಿದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ದಾಳಿಕೋರನನ್ನು ಬಂಧಿಸಲಾಗಿದೆ. ಈ ಘಟನೆ ಭಯೋತ್ಪಾದನೆಗೆ ಸಂಬಂಧಿಸಿದ್ದು ಎಂದು ತಕ್ಷಣಕ್ಕೆ ಅನಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.

‘ಘಟನೆ ಬಗ್ಗೆ ಮಾಹಿತಿ ಪಡೆಯಲು ಜನರು ಬಯಸುತ್ತಿದ್ದಾರೆ. ಸಾಧ್ಯವಾದಷ್ಟು ಬೇಗ ಮಾಹಿತಿ ಒದಗಿಸುತ್ತೇವೆ’ ಎಂದಿದ್ದಾರೆ.

ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೆಯಾಗುತ್ತಿದ್ದು, 36 ವರ್ಷದ ಗಡ್ಡಧಾರಿ ವ್ಯಕ್ತಿಯೊಬ್ಬ ಕತ್ತಿ ಹಿಡಿದು ಬಂದ ದೃಶ್ಯ ಅದರಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT