ಶನಿವಾರ, 24 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದ ಖೈಬರ್ ಪ್ರಾಂತ್ಯದಲ್ಲಿ ಗುಂಡಿನ ದಾಳಿ: ನಾಲ್ವರ ಸಾವು

Published 7 ಜನವರಿ 2024, 14:00 IST
Last Updated 7 ಜನವರಿ 2024, 14:00 IST
ಅಕ್ಷರ ಗಾತ್ರ

ಪೆಶಾವರ: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ನಾಲ್ವರನ್ನು  ಹತ್ಯೆ ಮಾಡಿದ್ದು, ಹಲವರು ಗಾಯಗೊಂಡಿದ್ದಾರೆ.

ಖುರ್ರಂ ಜಿಲ್ಲೆಯ ಸದ್ದಾ ಬಜಾರ್‌ನಲ್ಲಿ ದುಷ್ಕರ್ಮಿಗಳು ಸ್ವಯಂಚಾಲಿತ ಬಂದೂಕುಗಳಿಂದ ವಾಹನಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಮೃತಪಟ್ಟವರಲ್ಲಿ ಇಬ್ಬರು ಭದ್ರತಾ ಸಿಬ್ಬಂದಿ ಸೇರಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ದುಷ್ಕರ್ಮಿಗಳ ಪತ್ತೆಗಾಗಿ ಶೋಧಕಾರ್ಯ ನಡೆಯುತ್ತಿದೆ. ಯಾವುದೇ ಸಂಘಟನೆಗಳು ದಾಳಿಯ ಹೊಣೆ ಹೊತ್ತುಕೊಂಡಿಲ್ಲ ಎಂದಿದ್ದಾರೆ. ಈ ಪ್ರದೇಶದಲ್ಲಿ ಸುನ್ನಿ ಮತ್ತು ಶಿಯಾ ಗುಂಪುಗಳ ನಡುವೆ ಪದೇಪದೇ ಘರ್ಷಣೆ ನಡೆಯುತ್ತಿದೆ ಎಂದು ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT