ಹಾಂಗ್ ಕಾಂಗ್: ತೈವಾನ್ನಲ್ಲಿ ‘ರಾಗಸ’ ಚಂಡಮಾರುತ ಅವಾಂತರ ಸೃಷ್ಟಿಸಿದೆ. ಸರೋವರದ ತಡೆಗೋಡೆ ಒಡೆದು 14 ಮಂದಿ ಮೃತಪಟ್ಟಿದ್ದು, 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂಡಮಾರುತದ ಪರಿಣಾಮ ದಕ್ಷಿಣ ತೈವಾನ್ನಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಕಡಲತೀರದಲ್ಲಿ ಪ್ರವಾಹದಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಹಲವು ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ರಾಗಸ’ ಚಂಡಮಾರುತ ಮಂಗಳವಾರ ದಕ್ಷಿಣ ಚೀನಾಕ್ಕೆ ಅಪ್ಪಳಿಸಿದೆ. ಇದರಿಂದಾಗಿ ಹಲವೆಡೆ ವ್ಯಾಪಕ ಮಳೆ ಸುರಿಯುತ್ತಿದೆ.

ಚಂಡಮಾರುತ ಬುಧವಾರ ಹಾಂಗ್ ಕಾಂಗ್ ಕರಾವಳಿಗೆ ಅಪ್ಪಳಿಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ವಿವಿಧೆಡೆ ಪ್ರವಾಹ ಪರಿಸ್ಥಿತಿ ನಿರ್ಮಾಣ ಮತ್ತು ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದೂ ಹವಾಮಾನ ಇಲಾಖೆಯ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಚೀನಾದ ದಕ್ಷಿಣ ಭಾಗದ ಕನಿಷ್ಠ 10 ನಗರಗಳಲ್ಲಿ ಕಚೇರಿಗಳು ಮತ್ತು ಶಾಲೆಗಳನ್ನು ಮುಚ್ಚುವಂತೆ ಅಧಿಕಾರಿಗಳು ಆದೇಶಿಸಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳು ಸೇರಿದಂತೆ ಲಕ್ಷಾಂತರ ಜನರ ಮೇಲೆ ಪರಿಣಾಮ ಬೀರಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.