ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಉತ್ತರ ಭಾರತ, ಅಫ್ಗಾನಿಸ್ತಾನ, ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ: 9 ಮಂದಿ ಸಾವು

Published : 22 ಮಾರ್ಚ್ 2023, 2:55 IST
ಫಾಲೋ ಮಾಡಿ
Comments

ನವದೆಹಲಿ: ಅಫ್ಗಾನಿಸ್ತಾನದ ಹಿಂದೂಕುಶ್ ಪ್ರದೇಶದಲ್ಲಿ ಮಂಗಳವಾರ ತಡರಾತ್ರಿ 6.6 ತೀವ್ರತೆಯ ಭೂಕಂಪನವಾಗಿದೆ.

ಪಾಕಿಸ್ತಾನದಲ್ಲಿಯೂ ಕಂಪನವಾಗಿದ್ದು, 9 ಜನ ಮೃತಪಟ್ಟಿದ್ದಾರೆ. ಉತ್ತರ ಭಾರತದಲ್ಲೂ ಪ್ರಬಲ ಕಂಪನದ ಅನುಭವವಾಗಿದೆ.

ಅಮೆರಿಕದ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಭೂಕಂಪದ ಕೇಂದ್ರಬಿಂದು ಅಫ್ಗಾನಿಸ್ತಾನದ ಜುರ್ನ್‌ನಲ್ಲಿ 180 ಕಿಲೋಮೀಟರ್ ಆಳದಲ್ಲಿದೆ.

ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಪ್ರಬಲ ಭೂಕಂಪದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಪಂಜಾಬ್, ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದಲ್ಲೂ ಭೂಕಂಪದ ಅನುಭವವಾಗಿದೆ.

'ದೆಹಲಿ-ಎನ್‌ಸಿಆರ್‌ನಾದ್ಯಂತ ಬಲವಾದ ಕಂಪನಗಳು ಸಂಭವಿಸಿವೆ. ನೀವೆಲ್ಲರೂ ಸುರಕ್ಷಿತವಾಗಿರುತ್ತೀರಿ ಎಂದು ಭಾವಿಸುತ್ತೇವೆ' ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಟ್ವೀಟ್‌ ಮಾಡಿದ್ದಾರೆ.

9 ಮಂದಿ ಸಾವು
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪನದಿಂದ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ ಎಂದು ಪಾಕಿಸ್ತಾನದ ತುರ್ತು ಸೇವೆಗಳ ವಕ್ತಾರ ಬಿಲಾಲ್ ಫೈಜಿ ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಪಾಕಿಸ್ತಾನದ ಆರೋಗ್ಯ ಸಚಿವ ಅಬ್ದುಲ್ ಖಾದಿರ್ ಪಟೇಲ್ ಅವರು ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಫೆಡರಲ್ ಗವರ್ನಮೆಂಟ್ ಪಾಲಿಕ್ಲಿನಿಕ್‌ನಲ್ಲಿ ತುರ್ತು ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ಜಿಯೋ ನ್ಯೂಸ್ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT