ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇರಾನ್ | ಕಲ್ಲಿದ್ದಲು ಗಣಿಯಲ್ಲಿ ಮೀಥೇನ್‌ ಅನಿಲ ಸ್ಫೋಟ; 19 ಮಂದಿ ಕಾರ್ಮಿಕರ ಸಾವು

Published : 22 ಸೆಪ್ಟೆಂಬರ್ 2024, 6:36 IST
Last Updated : 22 ಸೆಪ್ಟೆಂಬರ್ 2024, 6:36 IST
ಫಾಲೋ ಮಾಡಿ
Comments

ದುಬೈ: ಇರಾನ್‌ನ ದಕ್ಷಿಣ ಖೊರಾಸಾನ್ ಪ್ರಾಂತ್ಯದ ಕಲ್ಲಿದ್ದಲು ಗಣಿಯಲ್ಲಿ ಮೀಥೇನ್‌ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 19 ಮಂದಿ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಅವಘಡದಲ್ಲಿ 17 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ 30 ಮಂದಿ ಗಣಿಯಲ್ಲಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ.

ಮದಂಜೂ ಕಂಪನಿ ನಡೆಸುತ್ತಿರುವ ಗಣಿ ‘ಬಿ’ ಮತ್ತು ‘ಸಿ’ ಬ್ಲಾಕ್‌ಗಳಲ್ಲಿ ಮೀಥೇನ್ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿದೆ. ಎರಡು ಬ್ಲಾಕ್‌ಗಳಲ್ಲಿ ಒಟ್ಟು 69 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಶನಿವಾರ ರಾತ್ರಿ 9 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT