ವಾಷಿಂಗ್ಟನ್: ಕೊರೊನಾ ವೈರಸ್ ಸೋಂಕು ನಿಯಂತ್ರಿಸುವಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರಯತ್ನಗಳಿಗೆ ಬದ್ಧವಾಗಿದ್ದ ಶ್ವೇತಭವನದ ಸಿಬ್ಬಂದಿ ಮುಖ್ಯಸ್ಥ ಮಾರ್ಕ್ ಮೆಡೋಸ್ ಅವರಿಗೆ ಕೋವಿಡ್-19 ದೃಢಪಟ್ಟಿರುವುದಾಗಿ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ರಾತ್ರಿ ತಿಳಿಸಿದ್ದಾರೆ.

ಚುನಾವಣೆಯ ನಂತರ ಬುಧವಾರ ಮೆಡೋಸ್ ಅವರಿಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಕುರಿತು ಅವರ ಸಲಹೆಗಾರರ ಸಣ್ಣ ತಂಡಕ್ಕೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಶ್ವೇತಭವನದ ಎರಡನೇ ಸಹಾಯಕರಿಗೂ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಪರಿಚಿತ ವ್ಯಕ್ತಿಯೊಬ್ಬರು ತಿಳಿಸಿದ್ದಾರೆ.

ಟ್ರಂಪ್‌ರ ಉನ್ನತ ಸಲಹೆಗಾರ ಮತ್ತು ಮಾಜಿ ಉತ್ತರ ಕೆರೊಲಿನಾದ ಶಾಸಕರಾದ ಮೆಡೋಸ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ನಿಯಮಿತವಾಗಿ ಮಂಗಳವಾರ ಅಧ್ಯಕ್ಷೀಯ ಚುನಾವಣೆ ನಡೆಯುವವರೆಗೂ ಪ್ರಚಾರ ರ್‍ಯಾಲಿಗಳಲ್ಲಿ ಪಾಲ್ಗೊಂಡಿದ್ದರು.

ಮತ್ತೋರ್ವ ಉನ್ನತ ಪ್ರಚಾರ ಸಹಾಯಕ ನಿಕ್ ಟ್ರೈನರ್ ಅವರಿಗೂ ಸಹ ಸೋಂಕು ತಗುಲಿದೆ ಎಂದು ಮೂಲಗಳು ತಿಳಿಸಿವೆ.

ಟ್ರಂಪ್ ಮತ್ತು ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್, ಅಧ್ಯಕ್ಷರ ಅರ್ಧ ಡಜನ್ ಸಹಾಯಕರು ಮತ್ತು ಉಪಾಧ್ಯಕ್ಷ ಮೈಕ್ ಪೆನ್ಸ್ ಅವರ ಸಿಬ್ಬಂದಿ ಮುಖ್ಯಸ್ಥ ಮಾರ್ಕ್ ಶಾರ್ಟ್ ಸೇರಿ ಐದು ಸಹಾಯಕರು ಕಳೆದ ಏಳು ವಾರಗಳಲ್ಲಿ ಸೋಂಕಿಗೆ ಒಳಗಾಗಿದ್ದರು.ಇದೀಗ ಮೆಡೋಸ್ ಅವರಿಗೆ ಬುಧವಾರ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.