ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳದ ಮನಾಸ್ಲು ಪರ್ವತದ‌ಲ್ಲಿ ಭಾರಿ ಹಿಮಕುಸಿತ: ಪ್ರವಾಹದ ಆತಂಕ

Published 21 ಏಪ್ರಿಲ್ 2024, 9:44 IST
Last Updated 21 ಏಪ್ರಿಲ್ 2024, 9:44 IST
ಅಕ್ಷರ ಗಾತ್ರ

ಕಠ್ಮಂಡು: ಉತ್ತರ ನೇಪಾಳದ ಮನಾಸ್ಲು ಪರ್ವತದ ಇಳಿಜಾರಿನ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಭಾರಿ ಹಿಮಕುಸಿತ ಸಂಭವಿಸಿದೆ. ಪರಿಣಾಮ ಕೆಳಗೆ ಇರುವ ಬೀರೇಂದ್ರ ಸರೋವರದಲ್ಲಿ ನೀರು ಉಕ್ಕಿ ಹರಿಯುತ್ತಿದೆ.

ಈವರೆಗೆ ಯಾವುದೇ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆದರೆ ಸರೋವರದಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮುನ್ನೆಚ್ಚರಿಕೆಯಾಗಿ ತಗ್ಗು ಪ್ರದೇಶದಲ್ಲಿರುವ ಹಳ್ಳಿಗಳ ಜನರಿಗೆ ಎಚ್ಚರಿಕೆಯಿಂದಿರಲು ಗೃಹ ಸಚಿವಾಲಯ ಸೂಚನೆ ನೀಡಿದೆ.

ಪ್ರವಾಹ ಸ್ಥಿತಿ ಎದುರಾದರೆ ಪರಿಸ್ಥಿತಿ ಬಿಗಡಾಯಿಸಲಿದೆ. ಸಮಯಕ್ಕೆ ಸರಿಯಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಲ್ಲಿನ ಪ್ರದೇಶಗಳಲ್ಲಿನ ಜನರಿಗೆ ನಾವು ಮನವಿ ಮಾಡಿದ್ದೇವೆ. ತಕ್ಷಣದ ಪ್ರತಿಕ್ರಿಯೆಯಾಗಿ ಆ ಪ್ರದೇಶಕ್ಕೆ ಭದ್ರತಾ ಸಿಬ್ಬಂದಿಯನ್ನು ಕಳುಹಿಸಲಾಗಿದೆ ಎಂದು ಗೃಹ ಸಚಿವಾಲಯದ ವಕ್ತಾರ ನಾರಾಯಣ ಪ್ರಸಾದ್‌ ಭಟ್ಟಾರೈ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT