ಮೊಗದಿಶು: ಸೊಮಾಲಿಯಾದ ರಾಜಧಾನಿ ಮೊಗದಿಶುವಿನಲ್ಲಿ ಶನಿವಾರ ಬೆಳಿಗ್ಗೆ ನಡೆದ ಟ್ರಕ್ ಬಾಂಬ್ ಸ್ಫೋಟದಲ್ಲಿ 76ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ನಗರದಲ್ಲಿ ನಡೆದ ಅತ್ಯಂತ ಭೀಕರ ದಾಳಿ ಇದಾಗಿದೆ.

ಸ್ಫೋಟಕ್ಕೆ 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ಸಾಗಿಸಿದ್ದು, ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸತ್ತವರಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳೂ ಇದ್ದಾರೆ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಮೇಯರ್ ಒಮರ್ ಮೊಹಮುದ್ ಮೊಹಮ್ಮದ್ ತಿಳಿಸಿದ್ದಾರೆ. ಟರ್ಕಿಯ ಇಬ್ಬರು ಈ ಘಟನೆಯಲ್ಲಿ ಸತ್ತಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಇಲ್ಲಿನ ತೆರಿಗೆ ಸಂಗ್ರಹ ಕೇಂದ್ರವನ್ನು ಗುರಿಯಾಗಿಸಿ ದಾಳಿ ನಡೆದಂತಿದೆ ಎಂದು ಕ್ಯಾಪ್ಟನ್ ಮೊಹಮದ್ ಹುಸೇನ್ ತಿಳಿಸಿದ್ದಾರೆ.

ದಾಳಿಗೆ ಸಂಬಂಧಿಸಿದಂತೆ ಇಲ್ಲಿಯವರೆಗೂ ಯಾವುದೇ ಸಂಘಟನೆ ಹೊಣೆ ಹೊತ್ತಿಲ್ಲ. ಆದರೆ ಈ ಮಾದರಿಯ ದಾಳಿಯನ್ನು ಗಮನಿಸಿದರೆ ಆಲ್‌ಕೈದಾ ಸಂಯೋಜಿತ ಸಂಘಟನೆಯಾದ ಅಲ್– ಶಬಾಬ್ ಮಾಡಿರಬಹುದು ಎಂದು ಶಂಕಿಸಲಾಗಿದೆ.

2017ರ ಅಕ್ಟೋಬರ್‌ನಲ್ಲಿ ಮೊಗದಿಶುವಿನಲ್ಲಿ ಇದೇ ರೀತಿಯ ಬಾಂಬ್ ದಾಳಿಯಲ್ಲಿ 500 ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು. ಇದು ಅಲ್ ಶಬಾಬ್ ಸಂಘಟನೆಯ ಕೃತ್ಯ ಎಂದು ಸೊಮಾಲಿಯಾ ಸರ್ಕಾರ ಆರೋಪಿಸಿತ್ತು. ಆದರೆ ಆ ಸಂಘಟನೆಯು ದಾಳಿಯ ಹೊಣೆಯನ್ನು ಹೊತ್ತುಕೊಂಡಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.