ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಸ್ರೇಲ್‌, ಇರಾನ್‌ ನಡುವಿನ ಸಂಘರ್ಷ ಉಲ್ಬಣ ಕಳವಳಕಾರಿ: ಭಾರತ

Published 14 ಏಪ್ರಿಲ್ 2024, 3:41 IST
Last Updated 14 ಏಪ್ರಿಲ್ 2024, 3:41 IST
ಅಕ್ಷರ ಗಾತ್ರ

ನವದೆಹಲಿ: ಇಸ್ರೇಲ್‌ ಮತ್ತು ಇರಾನ್‌ ನಡುವಿನ ಸಂಘರ್ಷ ಉಲ್ಬಣಿಸುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಭಾರತ, ‘ಈ ಎರಡೂ ದೇಶಗಳ ನಡುವಿನ ಯುದ್ಧ ಪ್ರಾದೇಶಿಕ ಶಾಂತಿ ಮತ್ತು ಸುರಕ್ಷತೆಗೆ ಬೆದರಿಕೆ ಒಡ್ಡಲಿದೆ’ ಎಂದು ಭಾನುವಾರ ಹೇಳಿದೆ.

ಪ್ರತೀಕಾರವಾಗಿ ಇರಾನ್‌, ನೂರಾರು ಕ್ಷಿಪಣಿಗಳ ಮೂಲಕ ಇಸ್ರೇಲ್‌ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಭಾರತ ಈ ಪ್ರತಿಕ್ರಿಯೆ ನೀಡಿದೆ.

‘ಉಭಯ ದೇಶಗಳ ನಡುವಿನ ಸಂಘರ್ಷವನ್ನು ಕೂಡಲೇ ಶಮನ ಮಾಡಬೇಕು. ರಾಜತಾಂತ್ರಿಕ ಮಾರ್ಗದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು’ ಎಂದೂ ಭಾರತ ಹೇಳಿದೆ.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಎರಡೂ ದೇಶಗಳಲ್ಲಿರುವ ರಾಯಭಾರ ಕಚೇರಿಗಳು ಅಲ್ಲಿ ವಾಸಿಸುತ್ತಿರುವ ಭಾರತೀಯ ಸಮುದಾಯದೊಂದಿಗೆ ನಿರಂತರ ಸಂಪರ್ಕದಲ್ಲಿವೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

‘ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಉದ್ಭವಿಸಲಿರುವ ಸನ್ನಿವೇಶವನ್ನು ಭಾರತ ಸೂಕ್ಷ್ಮವಾಗಿ ಗಮನಿಸುತ್ತಿದೆ’ ಎಂದೂ ಸಚಿವಾಲಯ ಹೇಳಿದೆ.

ವಿವೇಚನಾಶೀಲರಾಗಿ ಯೋಚಿಸುವ ಸಮಯ: ಡೆನ್ನಿಸ್‌ ಫ್ರಾನ್ಸಿಸ್‌

ಇರಾನ್–ಇಸ್ರೇಲ್ ಉದ್ವಿಗ್ನತೆ ಕುರಿತಂತೆ ಹೇಳಿಕೆ ಬಿಡುಗಡೆ ಮಾಡಿರುವ ಅಮೆರಿಕ ಜನರಲ್ ಅಸೆಂಬ್ಲಿ ಅಧ್ಯಕ್ಷ ಡೆನ್ನಿಸ್‌ ಫ್ರಾನ್ಸಿಸ್‌, ‘ಮಧ್ಯಪ್ರಾಚ್ಯದಲ್ಲಿ ಬಿಗಡಾಯಿಸುತ್ತಿರುವ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳವಾಗುತ್ತಿದೆ. ಈ ಪ್ರದೇಶದಲ್ಲಿ ಮತ್ತಷ್ಟು ಉದ್ವಿಗ್ನತೆಯನ್ನು ತಪ್ಪಿಸಲು ಎರಡು ದೇಶಗಳು ಅತ್ಯಂತ ಸಂಯಮದಿಂದ ವರ್ತಿಸಬೇಕಿದೆ. ಈ ಪರಿಸ್ಥಿತಿಯಲ್ಲಿ ವಿವೇಚನಾಶೀಲರಾಗಿ ಯೋಚಿಸುವುದು ಬಹಳ ಮುಖ್ಯವಾಗಿದೆ. ಇದನ್ನು ಇಲ್ಲಿಗೆ ಮುಕ್ತಾಯಗೊಳಿಸುತ್ತಾರೆ ಎಂಬ ನಂಬಿಕೆಯಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT