ಮೆಕ್ಸಿಕೊ ಸಿಟಿ: ಎಲ್ಪಿಜಿ ಗ್ಯಾಸ್ ತುಂಬಿದ್ದ ಟ್ಯಾಂಕರ್ ಒಂದು ಹೆದ್ದಾರಿಯಲ್ಲಿ ಉರುಳಿ ಬಿದ್ದು ಸ್ಪೋಟಗೊಂಡು ಕನಿಷ್ಠ ಮೂವರು ಮೃತಪಟ್ಟು 70 ಜನ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಮೆಕ್ಸಿಕೊ ದೇಶದಲ್ಲಿ ನಡೆದಿದೆ.

ಮೆಕ್ಸಿಕೊದ ಮೆಕ್ಸಿಕೊ ಸಿಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ನಡೆದಿದೆ.

ಗಾಯಗೊಂಡವರಲ್ಲಿ 19 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೆಕ್ಸಿಕೊ ಸಿಟಿ ಮೇಯರ್ ಕ್ಲಾರಾ ಬ್ರೂಗಡಾ ತಿಳಿಸಿದ್ದಾರೆ.

ಘಟನೆಯಲ್ಲಿ 18 ವಾಹನಗಳು ಸುಟ್ಟು ಕರಕಲಾಗಿವೆ ಎಂದು ಅವರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಉನ್ನತ ತನಿಖೆ ನಡೆಯುತ್ತಿದೆ. ಅದಾಗ್ಯೂ ಹೆದ್ದಾರಿಯಲ್ಲಿ ಟ್ಯಾಂಕರ್ ಉರುಳಿ ಬಿದ್ದು ಸ್ಫೋಟ ಸಂಭವಿಸಿರುವುದಾಗಿ ಪ್ರಾಥಮಿಕವಾಗಿ ತಿಳಿದು ಬಂದಿದೆ ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.