ಉಡುಪಿ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಉಂಟಾಗಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಕಾರಣ, ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಕೆಲವು ಸೂಚನೆಗಳನ್ನು ನೀಡಿದೆ.

ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು ಮಾರ್ಚ್ 2ರವರೆಗೆ ಮುಚ್ಚಲಾಗಿದ್ದು, ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿದ್ದಾರೆ.

ಜಿಲ್ಲಾಡಳಿತದ ಕ್ರಮಗಳು: ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ, ರಾಜ್ಯ ಮತ್ತು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 24 ಗಂಟೆಯೂ ಕಾರ್ಯನಿರ್ವಹಿಸುತ್ತಿವೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ರಾಯಭಾರಿ ಕಚೇರಿಗಳು ನೀಡುವ ಸೂಚನೆಗಳನ್ನು ಜಿಲ್ಲಾಡಳಿತವು ನಿರಂತರವಾಗಿ ಗಮನಿಸುತ್ತಿದೆ.

ಉಡುಪಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಮಾಹಿತಿಗಾಗಿ ಮತ್ತು ಸಹಾಯಕ್ಕಾಗಿ ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ: 0820–2574802 (1077 ಟೋಲ್ ಫ್ರೀ), ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ದೂ: 080–22340676, 080–22253707, ಟೋಲ್ ಫ್ರೀ ಸಂಖ್ಯೆ: 1070ಗೆ ಕರೆ ಮಾಡಿ ಮಾಹಿತಿ, ಸಹಾಯ ಪಡೆಯಬಹುದು.

ಸೂಚನೆಗಳು: ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರು ಅಲ್ಲಿನ ಸ್ಥಳೀಯ ಸರ್ಕಾರ ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿ ಅಥವಾ ಸಾರಥಿ ಸಹಾಯತಾ ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಬಹುದು. ವೀಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್.ಆರ್.ಆರ್.ಒ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.