ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮೆರಿಕ ಅಧ್ಯಕ್ಷೀಯ ಚುನಾವಣೆ: ಜೂನ್‌ 7ರಂದು ಪ್ರಚಾರ ಆರಂಭಿಸಲಿರುವ ಮೈಕ್‌ ಪೆನ್ಸ್‌

Published 1 ಜೂನ್ 2023, 14:50 IST
Last Updated 1 ಜೂನ್ 2023, 14:50 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿಯಾಗಲು ಪೈಪೋಟಿ ನಡೆದಿದ್ದು,  ಮಾಜಿ ಉಪಾಧ್ಯಕ್ಷ ಮೈಕ್‌ ಪೆನ್ಸ್‌ ಅವರು ಮುಂದಿನವಾರ ಅಯೋವಾದಲ್ಲಿ ಅಧಿಕೃತವಾಗಿ ಪ್ರಚಾರ ಆರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿಯಾಗುವುದಾಗಿ ಈಗಾಗಲೇ ಘೋಷಿಸಿದ್ದಾರೆ. ಈ ಮಧ್ಯೆ ಮೈಕ್‌ ಪೆನ್ಸ್‌ ಅವರು ಅಧ್ಯಕ್ಷೀಯ ಚುನಾವಣೆಯಲ್ಲಿ ಅಭ್ಯರ್ಥಿಯಾಗಲು ಅಗತ್ಯವಿರುವ ಮತಗಳನ್ನು ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ.

ತಮ್ಮ 64ನೇ ಜನ್ಮದಿನವಾದ ಜೂನ್‌ 7ರಂದು ಮೈಕ್‌ ಅವರು ಡೆಸ್ ಮೊಯಿನೆಸ್‌ನಲ್ಲಿ ಕಾರ್ಯಕ್ರಮ ಆಯೋಜಿಸಿದ್ದಾರೆ. ಅಂದು ಅವರು ಪ್ರಚಾರದ ಅಂಗವಾಗಿ ವಿಡಿಯೊ ಸಂದೇಶವನ್ನು ಬಿಡುಗಡೆಗೊಳಿಸುವ ಸಾಧ್ಯತೆ ಇದೆ. ಆದರೆ ಈ ಕುರಿತು ಯಾವುದೇ ಅಧಿಕೃತ ಹೇಳಿಕೆ ಹೊರಬಂದಿಲ್ಲ ಎಂದೂ ಹೇಳಿವೆ.

ಉಪಾಧ್ಯಕ್ಷರಾಗುವುದಕ್ಕೂ ಮುನ್ನ ಮೈಕ್‌ ಅವರು ಇಂಡಿಯಾನದ ಗವರ್ನರ್‌ ಆಗಿಯೂ ಕಾರ್ಯನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT