ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನ: ಆರು ಕ್ಷೌರಿಕರನ್ನು ಅಪಹರಿಸಿ ಹತ್ಯೆಗೈದ ಉಗ್ರರು

Published 2 ಜನವರಿ 2024, 10:08 IST
Last Updated 2 ಜನವರಿ 2024, 10:08 IST
ಅಕ್ಷರ ಗಾತ್ರ

ಪೇಶಾವರ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಆರು ಕ್ಷೌರಿಕರನ್ನು ಅಪಹರಿಸಿದ ಉಗ್ರರು ಬಳಿಕ ಅವರನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಉತ್ತರ ವಜಿರಿಸ್ತಾನ್ ಜಿಲ್ಲೆಯ ಮಿರ್ ಅಲಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಎಆರ್‌ವೈ ಸುದ್ದಿಸಂಸ್ಥೆ ಮಂಗಳವಾರ ವರದಿ ಮಾಡಿದೆ.

ಪಂಜಾಬ್ ಪ್ರಾಂತ್ಯದ ಈ ಆರು ಮಂದಿ ಸ್ಥಳೀಯ ಬಜಾರ್‌ನಲ್ಲಿ ಕ್ಷೌರಿಕ ಅಂಗಡಿಗಳನ್ನು ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅವರನ್ನು ಒಂದು ದಿನ ಮುಂಚಿತವಾಗಿ ಅಪಹರಿಸಲಾಗಿತ್ತು. ಮಂಗಳವಾರ ಅವರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯ ಹೊಣೆಗಾರಿಕೆಯನ್ನು ಯಾವುದೇ ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿಲ್ಲ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಶೋಧಕಾರ್ಯ ಆರಂಭಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT