ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದಕರಿಗೆ ತೃತೀಯ ರಾಷ್ಟ್ರಗಳ ಬೆಂಬಲ: ಇರಾನ್‌

Published 29 ಜನವರಿ 2024, 13:54 IST
Last Updated 29 ಜನವರಿ 2024, 13:54 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ‘ಪಾಕಿಸ್ತಾನ ಮತ್ತು ಇರಾನ್‌ ಗಡಿಪ್ರದೇಶದಲ್ಲಿ ನೆಲೆಸಿರುವ ಭಯೋತ್ಪಾದಕರಿಗೆ ತೃತೀಯ ರಾಷ್ಟ್ರಗಳು ಬೆಂಬಲ ನೀಡುತ್ತಿವೆ. ಈ ಬಗ್ಗೆ ಯಾವುದೇ ಅನುಮಾನಗಳಿಲ್ಲ’ ಎಂದು ಇರಾನ್‌ ವಿದೇಶಾಂಗ ಸಚಿವ ಹೊಸೈನ್ ಅಮಿರ್‌ ಅಬ್ದೊಲ್ಲಾಹಿಯಾನ್ ಆರೋಪಿಸಿದ್ದಾರೆ.

ಸೇನಾ ದಾಳಿಗೆ ಸಂಬಂಧಿಸಿದಂತೆ ಉಭಯ ರಾಷ್ಟ್ರಗಳ ನಡುವೆ ಉಂಟಾಗಿದ್ದ ಭಿನ್ನಮತ ಶಮನಕ್ಕಾಗಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದ ಹೊಸೈನ್‌ ಅವರು, ವಿದೇಶಾಂಗ ಸಚಿವ ಜಲೀಲ್‌ ಅಬ್ಬಾಸ್‌ ಜಿಲಾನಿ ಜತೆ  ಸೋಮವಾರ ಜಂಟಿ ಸುದ್ದಿಗೋಷ್ಠಿ ನಡೆಸಿದರು.  

ಅಫ್ಗಾನಿಸ್ತಾನದ ಮೇಲೆ ಪರೋಕ್ಷವಾಗಿ ಆರೋಪ ಮಾಡಿದ ಹುಸೈನ್‌, ‘ಗಡಿಭಾಗದಲ್ಲಿನ ಭಯೋತ್ಪಾದಕ ಚಟುವಟಿಕೆಗಳ ಹಿಂದೆ ತೃತೀಯ ರಾಷ್ಟ್ರಗಳ ಕೈವಾಡವಿದ್ದು, ಆ ರಾಷ್ಟ್ರಗಳು ಇರಾನ್‌ ಮತ್ತು ಪಾಕಿಸ್ತಾನಕ್ಕೆ ಯಾವುದೇ ಒಳಿತನ್ನು ಮಾಡುವುದಿಲ್ಲ’ ಎಂದು ಟೀಕಿಸಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಸಚಿವ ಜಿಲಾನಿ ಮಾತನಾಡಿ, ‘ಉಭಯ ರಾಷ್ಟ್ರಗಳು ಭಯೋತ್ಪಾದನೆಯ ಸವಾಲು ಎದುರಿಸುತ್ತಿವೆ. ಹೀಗಾಗಿ, ಭಯೋತ್ಪಾದನೆ ಎದುರಿಸಲು ಒಪ್ಪಿಗೆ ಸೂಚಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT