ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಲೆಂಡ್‌ನಲ್ಲಿ ಬಿತ್ತು ರಷ್ಯಾ ಹಾರಿಸಿದ ಕ್ಷಿಪಣಿ: ಇಬ್ಬರ ಸಾವು

ಉಕ್ರೇನ್ ಮೇಲೆ ರಷ್ಯಾ ಹಾರಿಸಿದ ಕ್ಷಿಪಣಿ
Last Updated 16 ನವೆಂಬರ್ 2022, 2:09 IST
ಅಕ್ಷರ ಗಾತ್ರ

ಕೀವ್: ಉಕ್ರೇನ್ ಮೇಲೆ ರಷ್ಯಾ ಹಾರಿಸಿದ ಕ್ಷಿಪಣಿಯೊಂದು ಪೋಲೆಂಡ್‌ನತ್ತ ಸಾಗಿ ಪತನಗೊಂಡಿದೆ. ಕ್ಷಿಪಣಿ ದಾಳಿಗೆ ಸಿಲುಕಿ ಪೋಲೆಂಡ್‌ನ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ.

ನ್ಯಾಟೋ ಪಡೆಯ ಸದಸ್ಯ ರಾಷ್ಟ್ರ ಪೋಲೆಂಡ್‌ ಮೇಲೆ ರಷ್ಯಾ ಕ್ಷಿಪಣಿ ದಾಳಿ ಮಾಡಿದೆ ಎಂದು ಅಮೆರಿಕ ಆರೋಪಿಸಿದೆ.

ಕ್ಷಿಪಣಿ ದಾಳಿಗೆ ಪೋಲೆಂಡ್ ನಾಗರಿಕರು ಬಲಿಯಾದ ಬೆನ್ನಲ್ಲೇ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಉಂಟಾಗಿದೆ.

ಜೋ ಬೈಡನ್ ನೇತೃತ್ವದ ಅಮೆರಿಕ ಸರ್ಕಾರ ತುರ್ತು ಸಭೆ ನಡೆಸಿದೆ. ಜತೆಗೆ, ಪೋಲೆಂಡ್ ಕೂಡ ಸೇನೆಯನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಿದೆ.

ಉಕ್ರೇನ್‌ನ ವಿದ್ಯುತ್ ಉತ್ಪಾದನಾ ಕೇಂದ್ರಗಳನ್ನು ಗುರಿಯಾಗಿಸಿ ರಷ್ಯಾ ಮಂಗಳವಾರ 100ಕ್ಕೂ ಅಧಿಕ ಕ್ಷಿಪಣಿ ದಾಳಿ ನಡೆಸಿದೆ. ಅವುಗಳು ಉಕ್ರೇನ್‌ನ ಬಹುತೇಕ ವಿದ್ಯುತ್ ಮತ್ತು ಇಂಧನ ಉತ್ಪಾದನಾ ಕೇಂದ್ರಗಳನ್ನು ಧ್ವಂಸಗೊಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT