ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆಂಪು ಸಮುದ್ರದ ಮೇಲೆ ಕ್ಷಿಪಣಿ ಹಾರಿಸಿದ ಹೂಥಿ ಬಂಡುಕೋರರು

Published 23 ಮೇ 2024, 14:32 IST
Last Updated 23 ಮೇ 2024, 14:32 IST
ಅಕ್ಷರ ಗಾತ್ರ

ದುಬೈ: ಯೆಮನ್‌ನ ಹೂಥಿ ಬಂಡುಕೋರರು ಕೆಂಪು ಸಮುದ್ರದ ಮೇಲೆ ಗುರುವಾರ ಕ್ಷಿಪಣಿ ದಾಳಿ ನಡೆಸಿದ್ದು, ಹಡಗುಗಳಿಗೆ ಯಾವುದೇ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕೆಂಪು ಸಮುದ್ರದಲ್ಲಿನ ಬಾಬ್‌–ಎಲ್‌–ಮಂಡೆಬ್ ಜಲಸಂಧಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎಂದು ಮ್ಯಾರಿಟೈಮ್ ಟ್ರೇಡ್ ಆಪರೇಷನ್ ಸೆಂಟರ್ ತಿಳಿಸಿದೆ.

ಖಾಸಗಿ ಭದ್ರತಾ ಸಂಸ್ಥೆ ಆಂಬ್ರೆ ಇದೇ ರೀತಿಯ ದಾಳಿಯನ್ನು ವರದಿ ಮಾಡಿದೆ. ಆದರೆ ಬಂಡುಕೋರರು ತಕ್ಷಣಕ್ಕೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.

ಹೂಥಿಗಳು ಈಚೆಗೆ ಕೆಂಪು ಸಮುದ್ರ ಮತ್ತು ಏಡನ್ ಕೊಲ್ಲಿಯಲ್ಲಿ ಸಂಚರಿಸುವ ಹಡಗುಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಗಾಜಾದಲ್ಲಿ ಇಸ್ರೇಲ್‌ ನಡೆಸುತ್ತಿರುವ ಯುದ್ಧವನ್ನು ಕೊನೆಗಾಣಿಸಬೇಕು ಎಂಬುದು ಅವರ ಪ್ರಮುಖ ಆಗ್ರಹವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT