ವಾಷಿಂಗ್ಟನ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫಲಪ್ರದ ಮಾತುಕತೆ ನಡೆಸಿದ್ದಾರೆ ಎಂದು ಶ್ವೇತಭವನ ತಿಳಿಸಿದೆ.

ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಮೋದಿ ಮತ್ತು ಟ್ರಂಪ್ ನಡುವೆ ಮಂಗಳವಾರ ನಡೆದ ದೂರವಾಣಿ ಸಂಭಾಷಣೆಯಲ್ಲಿ ಉದ್ಯಮಿ ಎಲಾನ್ ಮಸ್ಕ್ ಸಹ ಭಾಗವಹಿಸಿದ್ದರು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿತ್ತು. ಈ ಕುರಿತು ಕೇಳಿದ ಪ್ರಶ್ನೆಗೆ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕೆರೋಲಿನ್ ಲೀವಿಟ್ ,‘ಅಧ್ಯಕ್ಷ ಟ್ರಂಪ್ ಅವರು ಪ್ರಧಾನಿ ಮೋದಿ ಅವರೊಂದಿಗೆ ಅತ್ಯುತ್ತಮ ಸಂಬಂಧವನ್ನು ಹೊಂದಿದ್ದಾರೆ. ಅವರಿಬ್ಬರ ನಡುವೆ ಫಲಪ್ರದ ಸಂಭಾಷಣೆ ನಡೆಯಿತು’ಎಂದಷ್ಟೇ ಹೇಳಿದ್ದಾರೆ.

ಮಾತುಕತೆ ವೇಳೆ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ, ಸುರಕ್ಷಿತ ಸಂಚಾರದ ಮಹತ್ವವನ್ನು ಒತ್ತಿ ಹೇಳಿರುವ ಮೋದಿ, ಜಾಗತಿಕ ಶಾಂತಿ, ಸ್ಥಿರತೆ ಮತ್ತು ಆರ್ಥಿಕ ಸುಸ್ಥಿರತೆಗೆ ಅದರ ಮಹತ್ವವನ್ನು ವಿವರಿಸಿದ್ದಾರೆ.

‘ಮಂಗಳವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವಿನ ದೂರವಾಣಿ ಸಂಭಾಷಣೆಯಲ್ಲಿ ಉದ್ಯಮಿ ಎಲಾನ್ ಮಸ್ಕ್ ಸಹ ಭಾಗವಹಿಸಿದ್ದರು. ಯುದ್ಧಕಾಲದ ಬಿಕ್ಕಟ್ಟಿನ ಸಂದರ್ಭದಲ್ಲಿ ಎರಡು ರಾಷ್ಟ್ರಗಳ ಮುಖ್ಯಸ್ಥರ ನಡುವಿನ ಕರೆಯಲ್ಲಿ ಖಾಸಗಿ ವ್ಯಕ್ತಿಯೊಬ್ಬ ಕಾಣಿಸಿಕೊಂಡಿದ್ದು, ಅಸಾಮಾನ್ಯವಾಗಿತ್ತು. ಅಮೆರಿಕದ ಇಬ್ಬರು ಅಧಿಕಾರಿಗಳು ಸಹ ಇದನ್ನು ದೃಢಪಡಿಸಿದ್ದು, ಮಾತುಕತೆಯಲ್ಲಿ ಮಸ್ಕ್ ಸೇರ್ಪಡೆಯು ಟ್ರಂಪ್ ಜೊತೆಗೆ ಅವರ ಸಂಬಂಧ ಸುಧಾರಿಸಿರುವುದನ್ನುಸೂಚಿಸುತ್ತದೆ’ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಹೇಳಿತ್ತು. ಆ ಮಾತುಕತೆಯಲ್ಲಿ ಮಸ್ಕ್ ಉಪಸ್ಥಿತಿಯ ಕಾರಣ ಸ್ಪಷ್ಟವಾಗಿಲ್ಲ.

ಪಶ್ಚಿಮ ಏಷ್ಯಾ ಸಂಘರ್ಷ ಆರಂಭವಾದ ಬಳಿಕ ಮೋದಿ ಮತ್ತು ಟ್ರಂಪ್ ನಡುವಿನ ಮೊದಲ ಮಾತುಕತೆ ಇದಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.