ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಜ್‌ ಯಾತ್ರೆ: ಮೆಕ್ಕಾದಲ್ಲಿ ಹೆಚ್ಚಿದ ವಿದೇಶಿಯರ ಸಂಖ್ಯೆ

Published 12 ಜೂನ್ 2024, 12:14 IST
Last Updated 12 ಜೂನ್ 2024, 12:14 IST
ಅಕ್ಷರ ಗಾತ್ರ

ಮೆಕ್ಕಾ: ಜೂನ್‌ 14ರಿಂದ ಹಜ್‌ಯಾತ್ರೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಮುಸ್ಲಿಮರ ಪವಿತ್ರ ಸ್ಥಳವಾದ ಮೆಕ್ಕಾಕ್ಕೆ ಭೇಟಿ ನೀಡುವ ವಿದೇಶಿಯರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ.

ಮಂಗಳವಾರದ ವೇಳೆಗೆ ಸುಮಾರು 15 ಲಕ್ಷಕ್ಕೂ ಹೆಚ್ಚು ವಿದೇಶಿ ಯಾತ್ರಾರ್ಥಿಗಳು ಬಂದಿರುವುದಾಗಿ ಸೌದಿ ಅರೇಬಿಯಾದ ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ 18 ಲಕ್ಷಕ್ಕೂ ಹೆಚ್ಚು ಜನರು ಹಜ್‌ ಯಾತ್ರೆಗಾಗಿ ಮೆಕ್ಕಾಕ್ಕೆ ಭೇಟಿ ನೀಡುವ ನಿರೀಕ್ಷೆ ಇದ್ದು, ಈ ವರ್ಷ ಯಾತ್ರಾರ್ಥಿಗಳ ಸಂಖ್ಯೆಯು 2023ಕ್ಕಿಂತ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಸೌದಿ ಅಧಿಕಾರಿಗಳು ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ 4,200 ಪ್ಯಾಲೆಸ್ಟೀನಿಯನ್ನರು ಮೆಕ್ಕಾಕ್ಕೆ ಬಂದಿರುವುದಾಗಿ ಪ್ಯಾಲೇಸ್ಟಿನಿಯನ್ ಅವ್ಕಾಫ್ ಮತ್ತು ಧಾರ್ಮಿಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ. 2019ರಲ್ಲಿ, 24 ಲಕ್ಷಕ್ಕೂ ಹೆಚ್ಚು ಮುಸ್ಲಿಮರು ಮೆಕ್ಕಾಕ್ಕೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT