ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Morocco Earthquake: ಭೂಕಂಪ ಪೀಡಿತ ಮೊರಾಕ್ಕೊಗೆ ಪ್ರಧಾನಿ ಮೋದಿ ನೆರವಿನ ಭರವಸೆ

Published 9 ಸೆಪ್ಟೆಂಬರ್ 2023, 9:10 IST
Last Updated 9 ಸೆಪ್ಟೆಂಬರ್ 2023, 9:10 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಆಫ್ರಿಕಾದ ಭೂಕಂಪ ಪೀಡಿತ ಮೊರಾಕ್ಕೊ ದೇಶಕ್ಕೆ ಎಲ್ಲ ರೀತಿಯ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.

ಮೊರಾಕ್ಕೊದಲ್ಲಿ ಶುಕ್ರವಾರ ಸಂಭವಿಸಿದ 6.8ರ ತೀವ್ರತೆಯ ಪ್ರಬಲ ಭೂಕಂಪದಲ್ಲಿ 600ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಮೊರಾಕ್ಕೊದಲ್ಲಿ ಸಂಭವಿಸಿದ ಭೂಕಂಪದಲ್ಲಿ ಅಪಾರ ನಾಶ-ನಷ್ಟ ಸಂಭವಿಸಿದೆ.

ನವದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಮೊರಾಕ್ಕೊ ಭೂಕಂಪದಲ್ಲಿ ಮೃತಪಟ್ಟಿವರಿಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಈ ಕಷ್ಟದ ಸಮಯದಲ್ಲಿ ಜಾಗತಿಕ ಸಮುದಾಯವು ಮೊರಾಕ್ಕೊ ದೇಶದೊಂದಿಗೆ ಇದ್ದು, ಸಾಧ್ಯವಿರುವ ಎಲ್ಲ ನೆರವನ್ನು ನೀಡಲು ಭಾರತ ಸಿದ್ಧವಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT