ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಷ್ಯಾ ಅಧ್ಯಕ್ಷೀಯ ಚುನಾವಣೆ: 16 ಅಭ್ಯರ್ಥಿಗಳಿಂದ ಸ್ಪರ್ಧೆ

Published 20 ಡಿಸೆಂಬರ್ 2023, 10:32 IST
Last Updated 20 ಡಿಸೆಂಬರ್ 2023, 10:32 IST
ಅಕ್ಷರ ಗಾತ್ರ

ಮಾಸ್ಕೊ: ರಷ್ಯಾ ಅಧ್ಯಕ್ಷ ಸ್ಥಾನಕ್ಕಾಗಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಚುನಾವಣಾ ಆಯೋಗದ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಹಾಲಿ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ಐದನೇ ಅವಧಿಗೆ ಅಧಿಕಾರಕ್ಕೇರಲಿದ್ದಾರೆ ಎಂದು ವಿಶ್ಲೇಷಿಸಲಾಗಿದೆ.

'ಇದುವರೆಗೆ 16 ಅಭ್ಯರ್ಥಿಗಳಿಂದ ಅರ್ಜಿ ಸ್ವೀಕರಿಸಿದ್ದೇವೆ' ಎಂದು ಕೇಂದ್ರ ಚುನಾವಣಾ ಆಯೋಗದ (ಸಿಇಸಿ) ಅಧ್ಯಕ್ಷ ಎಲ್ಲಾ ಪಂಫಿಲೋವ ತಿಳಿಸಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

2024ರ ಮಾರ್ಚ್‌ 17ರಂದು ನಡೆಯುವ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಪುಟಿನ್‌ ಅವರು ಇದೇ ತಿಂಗಳ ಆರಂಭದಲ್ಲಿ ಘೋಷಿಸಿದ್ದಾರೆ.

ರಷ್ಯಾ ಸೇನೆ ಉಕ್ರೇನ್‌ನಲ್ಲಿ ಭಾಗಶಃ ವಶಪಡಿಸಿಕೊಂಡಿರುವ ನಾಲ್ಕು ಪ್ರಾಂತ್ಯಗಳಲ್ಲಿಯೂ ಮತದಾನ ನಡೆಸುವುದಾಗಿಯೂ ಸಿಇಸಿ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT