ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಪಾತ: ಮ್ಯುನಿಚ್‌ನಲ್ಲಿ ವಿಮಾನಗಳ ಹಾರಾಟ ಸ್ಥಗಿತ

Published 5 ಡಿಸೆಂಬರ್ 2023, 16:38 IST
Last Updated 5 ಡಿಸೆಂಬರ್ 2023, 16:38 IST
ಅಕ್ಷರ ಗಾತ್ರ

ಬರ್ಲಿನ್‌: ಶೀತ ಹವೆ ಹಾಗೂ ಹಿಮಪಾತದ ಕಾರಣ ಜರ್ಮನಿಯ ಮ್ಯೂನಿಚ್‌ ವಿಮಾನ ನಿಲ್ದಾಣದಲ್ಲಿ ಮಂಗಳವಾರ ವಿಮಾನಗಳ ಹಾರಾಟ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು.

‘ಸುರಕ್ಷತೆಯ ದೃಷ್ಟಿಯಿಂದ ವಿಮಾನಗಳ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ. ವಿಮಾನಗಳು ನಿಲುಗಡೆಯಾಗುವ ಸ್ಥಳದಲ್ಲಿ ಹಿಮವನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿದಿದೆ’ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

‌ನೆರೆಯ ಆಸ್ಟ್ರೀಯಾ ಮತ್ತು ಸ್ವಿಟ್ಜರ್‌ಲೆಂಡ್‌ನಲ್ಲೂ ಭಾರಿ ಹಿಮಪಾತವಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT