ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅನಾರೋಗ್ಯ: ಪಾಕ್‌ಗೆ ಮುಷರಫ್‌ ಸದ್ಯ ಮರಳುವುದಿಲ್ಲ’

Last Updated 28 ಏಪ್ರಿಲ್ 2019, 16:24 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಪಾಕಿಸ್ತಾನದ ಮಾಜಿ ಸೇನಾಧಿಕಾರಿ ಪರ್ವೇಜ್‌ ಮುಷರಫ್‌ ಅವರು, ದೇಶದ್ರೋಹ ಪ್ರಕರಣದ ವಿಚಾರಣೆಗೆ ಹಾಜರಾಗಲು ಪಾಕಿಸ್ತಾನಕ್ಕೆ ಮರಳುವುದಿಲ್ಲ ಎನ್ನಲಾಗಿದೆ.

75 ವರ್ಷದ ಮುಷರಫ್‌ ಅವರಿಗೆ ಮೇ 2ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿತ್ತು.

ಮುಷರಫ್‌ ಅನಾರೋಗ್ಯದಿಂದ ದುರ್ಬಲರಾಗಿದ್ದು, ಅವರ ಕುಟುಂಬದವರು ಪಾಕಿಸ್ತಾನಕ್ಕೆ ಹೋಗದಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಅವರ ವಕೀಲರು ತಿಳಿಸಿದ್ದಾರೆ.

ಮುಷರಫ್‌ ಪಾಕಿಸ್ತಾನಕ್ಕೆ ಬಂದು ವಿಚಾರಣೆಗೆ ಹಾಜರಾಗುವ ಇಚ್ಛೆ ಹೊಂದಿದ್ದಾರೆ. ಆದರೆ ಅವರು ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದು, ವೈದ್ಯರು ಪ್ರಯಾಣ ಮಾಡದಂತೆ ಸಲಹೆ ನೀಡಿದ್ದಾರೆ ಎಂದು ವಕೀಲರು ತಿಳಿಸಿದ್ದಾರೆ.

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮುಷರಫ್‌, ಕಳೆದ ತಿಂಗಳು ಆಸ್ಪತ್ರೆಗೆ ದಾಖಲಾಗಿದ್ದರು. ಈಗಲೂ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಷರಫ್‌ ಅವರು 2016ರಿಂದಲೂ ದುಬೈನಲ್ಲಿ ನೆಲೆಸಿದ್ದಾರೆ. 2007ರಲ್ಲಿ ಸಂವಿಧಾನದ ತತ್ವಗಳನ್ನು ಬುಡಮೇಲು ಮಾಡಿ, ದೇಶದಲ್ಲಿ ತುರ್ತುಪರಿಸ್ಥಿತಿ ಜಾರಿಗೊಳಿಸಿದಕ್ಕಾಗಿ ಮುಷರಫ್‌ ದೇಶದ್ರೋಹದ ಪ್ರಕರಣ ಎದುರಿಸುತ್ತಿದ್ದಾರೆ. ನ್ಯಾಯಾಲಯದಲ್ಲಿ ಇದು ಸಾಬೀತಾದರೆ, ಗಲ್ಲುಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಗೆ ಗುರಿಯಾಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT