ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮ್ಯಾನ್ಮಾರ್‌ನಲ್ಲಿ ಪ್ರತಿಭಟನೆ ತೀವ್ರ: ಭದ್ರತಾ ಪಡೆಗಳ ದಾಳಿಯಲ್ಲಿ ಆರು ಮಂದಿ ಸಾವು

Last Updated 28 ಫೆಬ್ರುವರಿ 2021, 11:41 IST
ಅಕ್ಷರ ಗಾತ್ರ

ಯಾಂಗೂನ್‌: ಮಿಲಿಟರಿ ಆಡಳಿತವನ್ನು ವಿರೋಧಿಸಿ ಮ್ಯಾನ್ಮಾರ್‌ನ ಹಲವೆಡೆ ನಡೆಯುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ. ಪ್ರತಿಭಟನೆ ವೇಳೆ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ನಾಯಕಿ ಆಂಗ್ ಸಾನ್ ಸೂಕಿ ಅವರನ್ನು ಬಿಡುಗಡೆ ಮಾಡಿ ಅಧಿಕಾರ ಹಸ್ತಾಂತರಿಸಬೇಕು ಎಂದು ಮ್ಯಾನ್ಮಾರ್‌ನ ಅನೇಕ ಕಡೆಗಳಲ್ಲಿ ಬೀದಿಬೀದಿಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನಕಾರರನ್ನು ಚದುರಿಸಲು ಮೊದಲಿಗೆ ಪೊಲೀಸರು ಅಶ್ರುವಾಯು, ಜಲಫಿರಂಗಿ ಪ್ರಯೋಗ ಮಾಡಿದ್ದಾರೆ.

ಮ್ಯಾನ್ಮಾರ್‌ನ ದಕ್ಷಿಣ ಕರಾವಳಿ ಕೇಂದ್ರ ದಾವೇಯಲ್ಲಿ ಭದ್ರತಾಪಡೆಗಳು ನಡೆಸಿದ ದಾಳಿಯಲ್ಲಿ ಮೂವರು ಮೃತಪಟ್ಟು ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ.

ಯಾಂಗೂನ್‌ ಬಳಿಯ ಬಾಗೊದಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಮಿಲಿಟರಿ ಆಡಳಿತ ವಿರೋಧಿಸಿ ಮ್ಯಾನ್ಮಾರ್‌ನಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ದಿನ ಕಳೆಯುತ್ತಿದ್ದಂತೆ ಪ್ರತಿಭಟನಕಾರರ ಮೇಲೆ ಸೇನೆ ನಡೆಸುತ್ತಿರುವ ಹಿಂಸಾಚಾರವೂ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT