ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾದಲ್ಲಿ ಡ್ರಗ್ಸ್ ವಿರುದ್ಧ ಸಮರ: 14 ಸಾವಿರ ಜನರ ಬಂಧನ

Published 25 ಡಿಸೆಂಬರ್ 2023, 2:52 IST
Last Updated 25 ಡಿಸೆಂಬರ್ 2023, 2:52 IST
ಅಕ್ಷರ ಗಾತ್ರ

ಕೊಲಂಬೊ: ಮಾದಕವಸ್ತು ಸಂಬಂಧಿತ ಚಟುವಟಿಕೆಗಳ ವಿರುದ್ಧ ಶ್ರೀಲಂಕಾ ಸರ್ಕಾರ ಸಮರ ಸಾರಿದೆ. ಒಂದು ವಾರದ ಕಾರ್ಯಾಚರಣೆಯಲ್ಲಿ ಸುಮಾರು 14 ಸಾವಿರ ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಅಧಿಕೃತ ಹೇಳಿಕೆಯ ಪ್ರಕಾರ, ಡಿಸೆಂಬರ್ 17 ರಿಂದ 24 ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿದ್ದು, ಒಟ್ಟು 13,666 ಶಂಕಿತರನ್ನು ಬಂಧಿಸಲಾಗಿದೆ. ಜತೆಗೆ 717 ಮಂದಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ.

ಬಂಧನಕ್ಕೊಳಗಾದವರಲ್ಲಿ, 174 ಮಂದಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಪ್ರಸ್ತುತ ತನಿಖೆಗೆ ಒಳಗಾಗಿದ್ದಾರೆ. ಉಳಿದಂತೆ 1,097 ಮಾದಕ ವ್ಯಸನಿಗಳನ್ನು ಪುನರ್ವಸತಿ ಕೇಂದ್ರಗಳಿಗೆ ಕಳುಹಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT