ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀಲಂಕಾ: ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದ ಕಾರ್ಯಾಚರಣೆ–14,000 ಮಂದಿ ಬಂಧನ

Published 24 ಡಿಸೆಂಬರ್ 2023, 13:31 IST
Last Updated 24 ಡಿಸೆಂಬರ್ 2023, 13:31 IST
ಅಕ್ಷರ ಗಾತ್ರ

ಪಿಟಿಐ

ಕೊಲಂಬೊ : ದ್ವೀಪ ರಾಷ್ಟ್ರದಲ್ಲಿ ವ್ಯಾಪಕವಾಗಿರುವ ಡ್ರಗ್ಸ್ ಸಾಗಣೆ ಮತ್ತು ಮಾರಾಟ ಜಾಲ ನಿಗ್ರಹಿಸುವುದಕ್ಕಾಗಿ ಒಂದು ವಾರ ಕಾಲ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 14,000 ಜನ ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದರು.

‘ಡಿ. 17ರಿಂದ 24ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು’ ಎಂದು ಅಧಿಕೃತ ಹೇಳಿಕೆಯಲ್ಲಿ ತಿಳಿಸಲಾಗಿದೆ. 

ಬಂಧಿತರ ಪೈಕಿ 174 ಮಂದಿ ಕಾನೂನುಬಾಹಿರ ಸ್ವತ್ತುಗಳನ್ನು ಸ್ವಾಧೀನಕ್ಕೆ ಪಡೆದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದಾರೆ. ಜೊತೆಗೆ 1,097 ಮಾದಕ ವ್ಯಸನಿಗಳನ್ನು ಪುನರ್ವಸತಿ ಕೇಂದ್ರಗಳಿಗೆ ಕಳುಹಿಸಲಾಗಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT