ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಕ್ರೇನ್‌ ಸ್ಥಿತಿ ಮಾನವೀಯ ಮೌಲ್ಯಕ್ಕೆ ಸಂಬಂಧಿಸಿದ ಸಮಸ್ಯೆ: ನರೇಂದ್ರ ಮೋದಿ

Published 21 ಮೇ 2023, 14:20 IST
Last Updated 21 ಮೇ 2023, 14:20 IST
ಅಕ್ಷರ ಗಾತ್ರ

ಹಿರೋಷಿಮಾ (ಪಿಟಿಐ): ಉಕ್ರೇನ್‌ನ ಸದ್ಯದ ಸ್ಥಿತಿಯನ್ನು ಮಾನವೀಯತೆ ಮತ್ತು ಮಾನವೀಯ ಮೌಲ್ಯಕ್ಕೆ ಸಂಬಂಧಿಸಿದ ಸಮಸ್ಯೆಯಂತೆ ನೋಡುತ್ತೇನೇ ಹೊರತು, ರಾಜಕೀಯ ಅಥವಾ ಆರ್ಥಿಕತೆಗೆ ಸಂಬಂಧಿಸಿದ ಸಮಸ್ಯೆಯಂತೆ ನೋಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಹೇಳಿದರು. ಇದೇ ವೇಳೆ ಅಂತರರಾಷ್ಟ್ರೀಯ ಕಾನೂನು, ಸಾರ್ವಭೌಮತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.

ಸಾಮಾಜಿಕ, ರಾಜಕೀಯ ಸ್ಥಿತಿಯನ್ನು ಬದಲಿಸುವ ಪ್ರಯತ್ನಗಳ ವಿರುದ್ಧ ಒಕ್ಕೊರಲಿನಿಂದ ಧ್ವನಿ ಎತ್ತಬೇಕು. ಎಲ್ಲಾ ರೀತಿಯ ಪ್ರಕ್ಷುಬ್ಧತೆ ಮತ್ತು ವಿವಾದಗಳನ್ನೂ ಶಾಂತಿಯುತವಾಗಿ ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಅವರು ಹೇಳಿದರು. 

ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರ ಜೊತೆ ಶನಿವಾರ ನಡೆಸಿದ ಮಾತುಕತೆಯನ್ನು ಉಲ್ಲೇಖಿಸಿದ ಅವರು, ಉಕ್ರೇನ್‌ ಮತ್ತು ರಷ್ಯಾ ನಡುವಿನ ಸಂಘರ್ಷ ಪರಿಹರಿಸುವ ನಿಟ್ಟಿನಲ್ಲಿ ಭಾರತ ತನ್ನಿಂದ ಸಾಧ್ಯವಿರುವ ಎಲ್ಲಾ ಸಹಾಯವನ್ನೂ ಮಾಡಲಿದೆ ಎಂದು ಪುನರುಚ್ಚರಿಸಿದರು.

ರಷ್ಯಾದ ದಾಳಿಯಿಂದ ರಕ್ಷಿಸಿಕೊಳ್ಳುವ ನಿಟ್ಟಿನಲ್ಲಿ ಉಕ್ರೇನ್‌ನ ಪ್ರಯತ್ನಕ್ಕೆ ಬೆಂಬಲ ನೀಡುವಂತೆ ಝೆಲೆನ್‌ಸ್ಕಿ ಅವರು ಜಿ7 ನಾಯಕರನ್ನು ಮನವಿ ಮಾಡಿದ ಹಿನ್ನೆಲೆಯಲ್ಲಿ ಮೋದಿ ಹೀಗೆ ಹೇಳಿದ್ದಾರೆ. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT