‘ಗುಂಡು ಹಾರಿಸಲು ಯಾರಾದರೂ ಆದೇಶ ನೀಡಿದ್ದಾರೆಯೇ ಎಂಬುದು ಸಾಬೀತಾಗಿಲ್ಲ. ಆದರೆ, ಗುಂಡು ಹಾರಿಸುವುದನ್ನು ಯಾರೂ ತಡೆಯಲಿಲ್ಲ. ಇದು ನಿರ್ಲಕ್ಷ್ಯ ಧೋರಣೆಯಾಗಿದೆ’ ಎಂದು ವರದಿಯಲ್ಲಿ ಹೇಳಲಾಗಿದೆ.

‘ಒಲಿ ಮತ್ತು ರಮೇಶ್ ಸೇರಿ ಕೆಲವರು ಕ್ರಿಮಿನಲ್ ಅಪರಾಧ ಎಸಗಿದ್ದಾರೆ. ಇವರಿಗೆ ಮೂರರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬೇಕು’ ಎಂದು ಸಮಿತಿ ಶಿಫಾರಸು ಮಾಡಿದೆ. ‘ಪ್ರತಿಭಟನಕಾರರ ಮೇಲೆ ಗುಂಡು ಹಾರಿಸಲು ನಾನು ಆದೇಶ ನೀಡಿಲ್ಲ’ ಎಂದು ಒಲಿ ಅವರು ಹೇಳಿದ್ದರು. ಚುನಾವಣೆಯಲ್ಲಿ ಸೋತ ಬಳಿಕ ‘ಎಎಫ್ಪಿ’ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ್ದ ಒಲಿ, ‘ಪ್ರತಿಭಟನೆಯನ್ನು ಒಳನುಸುಳುಕೋರರು ನಡೆಸಿದ್ದಾರೆ’ ಎಂದಿದ್ದರು.

ಪ್ರತಿಭಟನೆ ವೇಳೆ ಮೃತಪಟ್ಟವರ ಕುಟುಂಬಗಳು ಒಲಿ ಅವರ ಬಂಧನವನ್ನು ಸ್ವಾಗತಿಸಿವೆ.

ವೈದ್ಯಕೀಯ ತಪಾಸಣೆ: ‘ಬಂಧನದ ಬಳಿಕ ಒಲಿ ಅವರನ್ನು ತ್ರಿಭುವನ್ ವಿಶ್ವವಿದ್ಯಾಲಯ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗಾಗಿ ಕೊಂಡೊಯ್ಯಲಾಯಿತು. ಹೃದಯ ಮತ್ತು ಮೂತ್ರಪಿಂಡದ ಸಮಸ್ಯೆ ಇದ್ದಿದ್ದರಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-51-952302990

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.