ಕಠ್ಮಂಡು:ಭಾರತ ಮತ್ತು ನೇಪಾಳದ ರಾಜತಾಂತ್ರಿಕ ಅಧಿಕಾರಿಗಳ ನಡುವೆ ಸೋಮವಾರ ನಡೆದ ವರ್ಚುವಲ್ ಸಭೆಯಲ್ಲಿಹಿಮಾಲಯ ತಪ್ಪಲಿನಲ್ಲಿಭಾರತದ ನೆರವಿನೊಂದಿಗೆ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ನೇಪಾಳ – ಭಾರತದ ನಡುವೆ ಉದ್ಭವಿಸಿದ್ದ ಗಡಿ ವಿವಾದ ಮತ್ತು ಹೊಸ ರಾಜಕೀಯ ನಕ್ಷೆ ವಿವಾದದ ನಂತರ ಇದೇ ಮೊದಲ ಬಾರಿಗೆ ಉಭಯ ರಾಷ್ಟ್ರಗಳ ರಾಜತಾಂತ್ರಿಕ ಅಧಿಕಾರಿಗಳು ಸಭೆ ನಡೆಸಿದ್ದಾರೆ.

ನೇಪಾಳದ ವಿದೇಶಾಂಗ ಕಾರ್ಯದರ್ಶಿ ಶಂಕರ್ ದಾಸ್ ಬೈರಗಿ ಮತ್ತು ನೇಪಾಳದ ಭಾರತೀಯ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಅವರು ತಮ್ಮ ದೇಶದ ಪ್ರತಿನಿಧಿಗಳೊಂದಿಗೆ ಈ ಸಭೆಯಲ್ಲಿ ಭಾಗವಹಿಸಿದ್ದಾರೆ ಎಂದು ನೇಪಾಳ ವಿದೇಶಾಂಗ ಸಚಿವಾಲಯದ ಮೂಲಗಳು ತಿಳಿಸಿವೆ.

ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರು ದೂರವಾಣಿ ಮೂಲಕ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ 74ನೇ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದ ನಂತರ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕರ ನಡುವೆ ಈ ಸಭೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.