ಕಾಠ್ಮಂಡು: ಬಹುಮತದ ಸರ್ಕಾರ ರಚಿಸಲು ನೇಪಾಳದ ರಾಷ್ಟ್ರಪತಿ ವಿದ್ಯಾ ದೇವಿ ಭಂಡಾರಿ ಸರ್ವ ಪಕ್ಷಗಳನ್ನು ಆಹ್ವಾನಿಸಿದ್ದಾರೆ.

'ಪ್ರಧಾನ ಮಂತ್ರಿ ಸ್ಥಾನಕ್ಕೆ ಗುರುವಾರ ರಾತ್ರಿ 9ರೊಳಗೆ ಅಭ್ಯರ್ಥಿಯ ಹೆಸರು ಅಂತಿಮಗೊಳಿಸುವಂತೆ ಪಕ್ಷದ ಮುಖಂಡರಿಗೆ ರಾಷ್ಟ್ರಪತಿ ವಿದ್ಯಾ ದೇವಿ ಸೂಚಿಸಿದ್ದಾರೆ' ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

ಪಕ್ಷಗಳು ಮೈತ್ರಿ ಸರ್ಕಾರ ರಚಿಸಲು ರಾಷ್ಟ್ರಪತಿ ಮೂರು ದಿನಗಳ ಕಾಲಾವಕಾಶ ನೀಡಿದ್ದಾರೆ.

ನೇಪಾಳದ ಪ್ರಧಾನಮಂತ್ರಿ ಕೆ.ಪಿ.ಶರ್ಮಾ ಒಲಿ ನೇತೃತ್ವದ ಸರ್ಕಾರ ಪದಚ್ಯುತಗೊಂಡಿದ್ದು, ಅವರು ವಿಶ್ವಾಸಮತ ಕಳೆದುಕೊಂಡಿದ್ದಾರೆ. ಪುಷ್ಪಕಮಲ್ ದಾಹಲ್ ನೇತೃತ್ವದ ಸಿಪಿಎನ್ (ಮಾವೋವಾದಿ ಕೇಂದ್ರ) ಬೆಂಬಲ ಹಿಂತೆಗೆದುಕೊಂಡ ನಂತರ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತು.

275 ಸದಸ್ಯ ಬಲದ ಸಂಸತ್ತಿನಲ್ಲಿ ಬಹುಮತ ಸಾಬೀತುಪಡಿಸಲು ಕನಿಷ್ಠ 136 ಮತಗಳು ಅಗತ್ಯವಿತ್ತು. ನಾಲ್ಕು ಸದಸ್ಯರು ಅಮಾನತ್ತಿನಲ್ಲಿ ಇದ್ದು, 124 ಸದಸ್ಯರು ಒಲಿ ಸರ್ಕಾರದ ವಿರುದ್ಧ ಮತ ಚಲಾಯಿಸಿದರು. ಕೇವಲ 93 ಸದಸ್ಯ ಬೆಂಬಲ ಪಡೆಯಲಷ್ಟೇ ಪ್ರಧಾನಿ ಅಲಿ ಶಕ್ತರಾದರು.

ಪ್ರಧಾನಿ ಒಲಿ ಅವರ ಶಿಫಾರಸಿನಂತೆ ಕಳೆದ ಡಿಸೆಂಬರ್ 20ರಂದು ರಾಷ್ಟ್ರಪತಿ ಸಂಸತ್ತನ್ನು ವಿಸರ್ಜಿಸಿದ್ದು, ಹೊಸದಾಗಿ ಚುನಾವಣೆಗೆ ಆದೇಶಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.