ಪ್ರವಾಹ, ಭೂಕುಸಿತ, ತಗ್ಗು ಪ್ರದೇಶಗಳ ಮುಳುಗಡೆಯಿಂದಾಗಿ 31 ಕ್ಕೂ ಹೆಚ್ಚು ಜನ ನಾಪತ್ತೆಯಾಗಿದ್ದಾರೆ. 200 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯಾಡಳಿತ ಹೇಳಿದೆ.
ಕಠ್ಮಂಡು ಕಣಿವೆಯಲ್ಲಿ ಒಟ್ಟು 43 ಮಂದಿ ಮೃತಪಟ್ಟಿದ್ದಾರೆ. ಕನಿಷ್ಠ 322 ಮನೆಗಳು ಹಾಗೂ 16 ಸೇತುವೆಗಳು ಹಾನಿಗೊಳಗಾಗಿವೆ. ಭದ್ರತಾ ಸಿಬ್ಬಂದಿಯು 4000 ಜನರನ್ನು ರಕ್ಷಿಸಿದ್ದಾರೆ. 20 ಸಾವಿರ ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.
ನೇಪಾಳದಂತಹ ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ನಲ್ಲಿ ವ್ಯಾಪಕ ಮಳೆ, ಭೂಕುಸಿತ, ಪ್ರವಾಹ ಸಹಜ. ಆದರೆ, ಜಾಗತಿಕ ಹವಾಮಾನ ಬದಲಾವಣೆಯಿಂದ ಇತ್ತೀಚಿನ ವರ್ಷಗಳಲ್ಲಿ ನೈಸರ್ಗಿಕ ವಿಕೋಪದ ಪರಿಣಾಮಗಳು ಘೋರವಾಗುತ್ತಿವೆ ಎಂದು ಹವಾಮಾನ ಇಲಾಖೆ ಹೇಳಿದೆ.