ಕಠ್ಮಂಡು: ನೇಪಾಳದ ಹಂಗಾಮಿ ಪ್ರಧಾನಿ ಸುಶೀಲಾ ಕಾರ್ಕಿ ಅವರ ಸಂಪುಟಕ್ಕೆ ಸೇರ್ಪಡೆಗೊಂಡ ಮೂವರು ಸಚಿವರಿಗೆ ಅಧ್ಯಕ್ಷ ರಾಮಚಂದ್ರ ಪೌಡೆಲ್ ಸೋಮವಾರ ಪ್ರಮಾಣ ವಚನ ಬೋಧಿಸಿದರು.

ನೇಪಾಳದ ಮೊದಲ ಮಹಿಳಾ ಪ್ರಧಾನಿಯಾಗಿ 73 ವರ್ಷದ ಕಾರ್ಕಿ ಅವರು ಭಾನುವಾರ ಅಧಿಕಾರವಹಿಸಿಕೊಂಡಿದ್ದಾರೆ.

ಕುಲ್ಮನ್ ಘಿಸಿಂಗ್, ರಾಮೇಶ್ವರ್ ಖನಾಲ್ ಮತ್ತು ಓಂ ಪ್ರಕಾಶ್ ಆರ್ಯಲ್ ಅವರನ್ನು ಸಚಿವರನ್ನಾಗಿ ನೇಮಕ ಮಾಡಲಾಗಿದೆ. ರಾಜಧಾನಿ ಕಠ್ಮಂಡುವಿನ ರಾಷ್ಟ್ರಪತಿ ಕಚೇರಿಯಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು.

ಮಾಜಿ ಹಣಕಾಸು ಕಾರ್ಯದರ್ಶಿ ಖನಾಲ್ ಹಣಕಾಸು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನೇಪಾಳ ವಿದ್ಯುತ್ ಪ್ರಾಧಿಕಾರದ ಮಾಜಿ ವ್ಯವಸ್ಥಾಪಕ ನಿರ್ದೇಶಕ ಘಿಸಿಂಗ್ ಅವರು ಇಂಧನ, ಜಲ ಸಂಪನ್ಮೂಲಗಳು ಮತ್ತು ನೀರಾವರಿ, ಭೌತಿಕ ಮೂಲಸೌಕರ್ಯ ಮತ್ತು ಸಾರಿಗೆ, ನಗರಾಭಿವೃದ್ಧಿ ಮೂರು ಖಾತೆಗಳನ್ನು ವಹಿಸಿಕೊಂಡಿದ್ದಾರೆ.

ವಕೀಲರಾಗಿರುವ ಆರ್ಯಲ್, ಗೃಹ ವ್ಯವಹಾರ ಮತ್ತು ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಪ್ರಮಾಣ ವಚನದ ಬಳಿಕ ಮೂವರು ಸಚಿವರು ತಮ್ಮ ಕಚೇರಿಗಳಲ್ಲಿ ಅಧಿಕಾರವಹಿಸಿಕೊಂಡರು.

ಭ್ರಷ್ಟಾಚಾರ ಹಾಗೂ ಸಾಮಾಜಿಕ ಜಾಲತಾಣಗಳ ಮೇಲಿನ ನಿಷೇಧದ ವಿರುದ್ಧ ದೇಶವ್ಯಾಪಿ ನಡೆದ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಕೆ.ಪಿ. ಶರ್ಮಾ ಓಲಿ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಬಳಿಕ ನೇಪಾಳ ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕಾರ್ಕಿ ಹಂಗಾಮಿ ಪ್ರಧಾನಿಯಾಗಿ ನೇಮಕಗೊಂಡಿದ್ದಾರೆ.
.ವಾರಾಣಸಿ ಜೊತೆ ನೇಪಾಳ ಪ್ರಧಾನಿ ಸುಶೀಲಾ ಕಾರ್ಕಿ ಅವಿನಾಭಾವ ನಂಟು.ನೇಪಾಳ: ನೂತನ ಪ್ರಧಾನಿಯಾಗಿ ಸುಶೀಲಾ ಕಾರ್ಕಿ ಪ್ರಮಾಣವಚನ ಸ್ವೀಕಾರ.ನೇಪಾಳದ ಮಧ್ಯಂತರ ಸರ್ಕಾರದ ಪ್ರಧಾನಿ ಸುಶೀಲಾ ಕಾರ್ಕಿಗೆ ನರೇಂದ್ರ ಮೋದಿ ಅಭಿನಂದನೆ.’ನೇಪಾಳ: ಹಿಂಸಾಚಾರ ಪೂರ್ವನಿಯೋಜಿತ‘– ಪ್ರಧಾನಿ ಸುಶೀಲಾ ಕಾರ್ಕಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.