ಬುಧವಾರ, 15 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃತ್ತಿಪರರೊಂದಿಗಿನ ಸಂವಾದ ಹೆಚ್ಚು ಖುಷಿ ನೀಡಿದೆ: ಬೈಡನ್ ಅತಿಥ್ಯಕ್ಕೆ ಮೋದಿ ಧನ್ಯವಾದ

Published 24 ಜೂನ್ 2023, 5:04 IST
Last Updated 24 ಜೂನ್ 2023, 5:04 IST
ಅಕ್ಷರ ಗಾತ್ರ

ವಾಷಿಂಗ್ಟನ್: ಅಮೆರಿಕ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಾಷಿಂಗ್ಟನ್‌ ಡಿ.ಸಿ.ಯಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖ ವೃತ್ತಿಪರರೊಂದಿಗೆ ಸಂವಾದ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ವಾಷಿಂಗ್ಟನ್‌ ಡಿ.ಸಿ.ಯಲ್ಲಿ ವಿವಿಧ ಕ್ಷೇತ್ರಗಳ ಪ್ರಮುಖರೊಂದಿಗಿನ ಸಂವಾದ ನನಗೆ ಹೆಚ್ಚು ಖುಷಿ ನೀಡಿದೆ’ ಎಂದು ಬರೆದುಕೊಂಡಿದ್ದಾರೆ.

ಸಭೆಯಲ್ಲಿ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಮತ್ತು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದರು. ಭಾರತದ ಬೆಳವಣಿಗೆ ಮತ್ತು ಭಾರತದಲ್ಲಿ ಹೂಡಿಕೆಗೆ ಇರುವ ಅವಕಾಶಗಳ ಕುರಿತು ಚರ್ಚೆ ನಡೆಸಲಾಯಿತು ಎಂದು ಮೋದಿ ತಿಳಿಸಿದ್ದಾರೆ.

‘ಬಹಳ ವಿಶೇಷವಾದ ಮೂರು ದಿನಗಳ ಅಮೆರಿಕ ಭೇಟಿಯನ್ನು ಮುಕ್ತಾಯಗೊಳಿಸುತ್ತಿದ್ದೇನೆ. ಈ ಬಾರಿಯ ಭೇಟಿಯ ಸಂದರ್ಭದಲ್ಲಿ ಭಾರತ - ಅಮೆರಿಕದ ಭಾಂದವ್ಯಕ್ಕೆ ಮತ್ತಷ್ಟು ಬಲ ನೀಡುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳು ಮತ್ತು ಸಂವಾದಗಳಲ್ಲಿ ಭಾಗವಹಿಸಲು ನನಗೆ ಅವಕಾಶ ಸಿಕ್ಕಿತ್ತು. ಮುಂಬರುವ ಪೀಳಿಗೆಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಉಭಯ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುತ್ತವೆ’ ಎಂದು ಮೋದಿ ಹೇಳಿದ್ದಾರೆ.

‘ಅಮೆರಿಕ ಸಂಸತ್‌ನ ಭಾಷಣದಿಂದ ಹಿಡಿದು ವಿಶ್ವಸಂಸ್ಥೆಯ ಯೋಗ ದಿನದವರೆಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನಡೆಸಿದ ಮಾತುಕತೆ ವಿಭಿನ್ನ ಚಿಂತನೆಯಿಂದ ಕೂಡಿತ್ತು. ಜೋ ಬೈಡನ್ ಮತ್ತು ಅಮೆರಿಕದ ಜನರ ಆತಿಥ್ಯಕ್ಕಾಗಿ ನಾನು ಧನ್ಯವಾದ ಹೇಳುತ್ತೇನೆ’ ಎಂದು ಮೋದಿ ತಿಳಿಸಿದ್ದಾರೆ.

ವಾಷಿಂಗ್ಟನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿರುವ ಮೋದಿ, ‘ನಮ್ಮ ಸಾಗರೋತ್ತರ ಸಮುದಾಯದ ಶಕ್ತಿ, ವೈವಿಧ್ಯತೆ ಮತ್ತು ಕೊಡುಗೆಗೆ ಹೃತ್ಪೂರ್ವಕ ಗೌರವ. ಅವರ ಉತ್ಸಾಹ ನಮ್ಮ ಹೆಮ್ಮೆ’ ಎಂದು ಕೊಂಡಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT