ಬೀಜಿಂಗ್: ಚೀನಾದ ವಾಯವ್ಯ ಭಾಗದಲ್ಲಿರುವ ಡೇಲಿಯನ್ ನಗರದ ವಿಶ್ವವಿದ್ಯಾಲಯವೊಂದರಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಅಲ್ಲಿನ 1500 ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗಳಲ್ಲಿ ಮತ್ತು ಹೊಟೆಲ್‌ಗಳಲ್ಲಿ ಉಳಿಯುವಂತೆ ಚೀನಾ ಸರ್ಕಾರ ಆದೇಶಿಸಿದೆ.

ನಗರದ ಜುವಾಂಗ್ ವಿಶ್ವವಿದ್ಯಾಲಯ ಹಲವು ಕೋವಿಡ್ ಪ್ರಕರಣಗಳು ವರದಿಯಾದ ನಂತರ ನೂರಾರು ವಿದ್ಯಾರ್ಥಿಗಳನ್ನು ವೀಕ್ಷಣೆಗಾಗಿ ಹೋಟೆಲ್‌ಗಳಿಗೆ ವರ್ಗಾಯಿಸಲಾಗಿತ್ತು. ಇದಾದ ಬಳಿಕ ಚೀನಾ ಸರ್ಕಾರ ಭಾನುವಾರ ಈ ಆದೇಶ ಹೊರಡಿಸಿದೆ.

ವಿದ್ಯಾರ್ಥಿಗಳು ಆನ್‌ಲೈನ್ ತರಗತಿಗೆಹಾಜರಾಗುತ್ತಿದ್ದು, ಊಟ, ಉಪಹಾರವನ್ನು ಅವರ ಕೊಠಡಿಗಳಿಗೆ ತಲುಪಿಸಲಾಗುತ್ತಿದೆ.

ಕೋವಿಡ್ ಪ್ರಕರಣಗಳನ್ನು ಶೂನ್ಯಕ್ಕೆ ಇಳಿಸುವುದಕ್ಕೆ ಚೀನಾಸರ್ಕಾರ ಏಕಾಏಕಿ ಲಾಕ್‌ಡೌನ್ ಘೋಷಿಸಿದ್ದು, ಇದು ಜನರ ಜೀವನ ಮತ್ತು ಜೀವನೋಪಾಯಕ್ಕೆ ಸಾಕಷ್ಟು ಅಡ್ಡಿ ಉಂಟು ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.