ನ್ಯೂಯಾರ್ಕ್: ಡೆಮಾಕ್ರಟಿಕ್ ಪಕ್ಷದ ಜೊಹ್ರಾನ್ ಮಂಬಾನಿ ಅವರು ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.

34 ವರ್ಷದ ಮಂಬಾನಿ, ಪಕ್ಷೇತರರಾಗಿ ಕಣಕ್ಕಿಳಿದಿದ್ದ ಮಾಜಿ ಗವರ್ನರ್ ಆಂಡ್ರ್ಯೂ ಕ್ಯುಮೊ ಹಾಗೂ ರಿಪಬ್ಲಿಕನ್ ಪಕ್ಷದ ಕರ್ಟಿಸ್ ಸ್ಲಿವಾ ಅವರ ಎದುರು ಜಯ ಗಳಿಸಿದ್ದಾರೆ.

ಈ ಜಯದೊಂದಿಗೆ ಅವರು, ನ್ಯೂಯಾರ್ಕ್ ನಗರದ ಮೇಯರ್ ಆಗಿ ಚುನಾಯಿತರಾದ ಮೊದಲ ಮುಸ್ಲಿಂ ಎನಿಸಿದ್ದಾರೆ. ಹಾಗೆಯೇ, ನಗರದ ಮೇಯರ್ ಆದ ದಕ್ಷಿಣ ಏಷ್ಯಾ ಮೂಲದ ಮೊದಲಿಗ ಎಂಬ ಶ್ರೇಯಕ್ಕೂ ಭಾಜನರಾಗಿದ್ದಾರೆ.

ಒಂದು ಶತಮಾನಕ್ಕೂ ಹೆಚ್ಚಿನ ಸಮಯದಿಂದ ನ್ಯೂಯಾರ್ಕ್ ಮೇಯರ್ ಆಗಿ ಆಯ್ಕೆಯಾದವರಲ್ಲೇ ಅತ್ಯಂತ ಕಿರಿಯ ವ್ಯಕ್ತಿ ಎನಿಸಿರುವ ಮಂಬಾನಿ, ಜನವರಿ 1ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಚುನಾವಣೆಗೂ ಮುನ್ನ ನೀಡಿದ್ದ ಆಶ್ವಾಸನೆಗಳಂತೆ, ಅಮೆರಿಕದ ಅತಿದೊಡ್ಡ ನಗರದ ಜನರ ಮಹತ್ವಾಕಾಂಕ್ಷೆಗಳನ್ನು ಈಡೇರಿಸುವ ಹೊಣೆ ಮಂಬಾನಿ ಅವರ ಮೇಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.