ವೆಲ್ಲಿಂಗ್ಟನ್: ಸಮುದಾಯದಲ್ಲಿ ಕೇವಲ ಒಂದೇ ಒಂದು ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗುತ್ತಿದ್ದಂತೆ ನ್ಯೂಜಿಲೆಂಡ್ ಸರ್ಕಾರ ಮಂಗಳವಾರ ಇಡೀ ರಾಷ್ಟ್ರದಲ್ಲಿ ಮೂರು ದಿನಗಳ ಲಾಕ್‌ಡೌನ್ ಘೋಷಿಸಿದೆ.

‘ನಮಗೆ ಎಚ್ಚೆತ್ತುಕೊಳ್ಳಲು ಒಮ್ಮೆ ಮಾತ್ರ ಅವಕಾಶ ಸಿಗುತ್ತದೆ. ಅದರಲ್ಲಿ ವಿಫಲವಾದರೆ ಸಾಂಕ್ರಾಮಿಕ ರೋಗ ಯಾವ ರೀತಿ ಉತ್ತುಂಗಕ್ಕೆ ಹೋಗುತ್ತದೆ ಎನ್ನುವುದನ್ನು ಬೇರೆ ರಾಷ್ಟ್ರಗಳಲ್ಲಿ ನಾವು ಕಂಡಿದ್ದೇವೆ’ ಎಂದು ಪ್ರಧಾನಿ ಜಸಿಂದಾ ಆರ್ಡೆರ್ನ್ ಹೇಳಿದ್ದಾರೆ.

ಕೊರೊನಾ ಮೊದಲ ಅಲೆಯಲ್ಲಿ ಸೋಂಕನ್ನು ಮತ್ತು ಫೆಬ್ರುವರಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಎರಡನೇ ಅಲೆಯನ್ನು ಸಂಪೂರ್ಣ ನಿರ್ಮೂಲನೆ ಮಾಡುವಲ್ಲಿ ನ್ಯೂಜಿಲೆಂಡ್ ಯಶಸ್ವಿಯಾಗಿತ್ತು. ಆದರೆ, ಡೆಲ್ಟಾ ರೂಪಾಂತರದ ಸಾಂಕ್ರಾಮಿಕವನ್ನು ತಡೆಗಟ್ಟಲು ಹಿಂದಿನ ಕ್ರಮಗಳಿಗಿಂತ ಹೆಚ್ಚಿನ ಕಠಿಣ ಕ್ರಮದ ಅಗತ್ಯವಿರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.