ಸ್ಟಾಕ್ಹೋಮ್: ರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸಂಬಂಧಿಸಿದ ಸಂಶೋಧನೆಗಾಗಿ ವಿಜ್ಞಾನಿಗಳಾದ ಅಮೆರಿಕದ ಮೇರಿ ಈ. ಬ್ರಂಕೋ, ಫ್ರೆಡ್ ರಾಮ್ಸ್ಡೆಲ್ ಹಾಗೂ ಜಪಾನ್ನ ಶಿಮೋನ್ ಸಕಾಗುಚಿ ಅವರಿಗೆ 2025ನೇ ಸಾಲಿನ ವೈದ್ಯಕೀಯ ಕ್ಷೇತ್ರದ ನೊಬೆಲ್ ಪ್ರಶಸ್ತಿ ಘೋಷಿಸಲಾಗಿದೆ.

ಸ್ಟಾಕ್ಹೋಮ್ನ ಕರೊಲಿನ್ಸ್ಕಾ ಇನ್ಸ್ಟಿಟ್ಯೂಟ್ನಲ್ಲಿ ವೈದ್ಯಕೀಯ ನೊಬೆಲ್ ಪುರಸ್ಕೃತರ ಹೆಸರುಗಳನ್ನು ಸೋಮವಾರ ಪ್ರಕಟಿಸುವುದರೊಂದಿಗೆ ಈ ವರ್ಷದ ನೊಬೆಲ್ ಪುರಸ್ಕಾರ ಘೋಷಣೆಗೆ ಚಾಲನೆ ಸಿಕ್ಕಂತಾಗಿದೆ.

ಕ್ಯಾನ್ಸರ್ಗೆ ಹೊಸ ವಿಧಾನದಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗಬಲ್ಲ ‘ಮೈಕ್ರೋಆರ್ಎನ್ಎ’
ಆವಿಷ್ಕಾರಕ್ಕಾಗಿ ಅಮೆರಿಕದ ವಿಕ್ಟರ್ ಆ್ಯಂಬ್ರೊಸ್ ಮತ್ತು ಗ್ಯಾರಿ ರುವ್ಕನ್ ಅವರಿಗೆ ಕಳೆದ ವರ್ಷ ವೈದ್ಯಕೀಯ ಕ್ಷೇತ್ರದ ನೊಬೆಲ್ ಪುರಸ್ಕಾರ ದೊರೆತಿತ್ತು.

ಭೌತವಿಜ್ಞಾನ, ರಸಾಯನ ವಿಜ್ಞಾನ ಕ್ಷೇತ್ರಗಳ ಪ್ರಶಸ್ತಿ ವಿಜೇತರ ಹೆಸರನ್ನು ಕ್ರಮವಾಗಿ ಮಂಗಳವಾರ ಹಾಗೂ ಬುಧವಾರ ಪ್ರಕಟಿಸಲಾಗುತ್ತದೆ.

ಸಾಹಿತ್ಯ ಕ್ಷೇತ್ರದ ಪುರಸ್ಕಾರವನ್ನು ಗುರುವಾರ ಹಾಗೂ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ಘೋಷಿಸಲಾಗುತ್ತದೆ. ಅ.13ರಂದು ಅರ್ಥಶಾಸ್ತ್ರ ನೊಬೆಲ್ ಪುರಸ್ಕಾರ ಘೋಷಿಸಲಾಗುತ್ತದೆ.

ಡಿಸೆಂಬರ್ 10ರಂದು ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.