ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಎಸ್‌ನ ಇಬ್ಬರು ಸದಸ್ಯರನ್ನು ಹತ್ಯೆಗೈದ ತಾಲಿಬಾನ್‌ ಪಡೆ

Last Updated 27 ಫೆಬ್ರುವರಿ 2023, 13:14 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌ (ಪಿಟಿಐ): ‘ತಾಲಿಬಾನ್‌ ಪಡೆಯು ಕಾಬೂಲ್‌ನಲ್ಲಿ ರಾತ್ರಿ ವೇಳೆ ನಡೆಸಿದ ದಾಳಿಯಲ್ಲಿ ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಭಯೋತ್ಪಾದಕ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದು, ಮತ್ತೊಬ್ಬ ಉಗ್ರನನ್ನು ಬಂಧಿಸಿದೆ’ ಎಂದು ತಾಲಿಬಾನ್‌ ಸರ್ಕಾರದ ವಕ್ತಾರರೊಬ್ಬರು ಸೋಮವಾರ ತಿಳಿಸಿದ್ದಾರೆ.

‘ಕಾಬೂಲ್‌ನಲ್ಲಿ ದಾಳಿ ನಡೆಸಲು ಯೋಜಿಸಿದ್ದ ಐಎಸ್‌ ಉಗ್ರರನ್ನು ಗುರಿಯಾಗಿಸಿ ಖೇರ್‌ ಖಾನಾದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಖೇರ್‌ ಖಾನಾವು ಐಎಸ್‌ನ ಪ್ರಮುಖ ಅಡಗುದಾಣವಾಗಿದೆ’ ಎಂದು ತಾಲಿಬಾನ್‌ ಸರ್ಕಾರದ ವಕ್ತಾರ ಜಬಿವುಲ್ಲಾ ಮುಜಾಹಿದ್‌ ಅವರು ಹೇಳಿದ್ದಾರೆ.

‘ದಾಳಿ ವೇಳೆ ಮದ್ದುಗುಂಡು ಹಾಗೂ ಮಿಲಿಟರಿ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ವೇಳೆ ತಾಲಿಬಾನ್‌ ಪಡೆಗೆ ಯಾವುದೇ ಹಾನಿಯಾಗಿಲ್ಲ’ ಎಂದೂ ಜಬಿವುಲ್ಲಾ ಮಾಹಿತಿ ನೀಡಿದ್ದಾರೆ.

ದಾಳಿ ಕುರಿತಂತೆ ಐಎಸ್‌ ತಕ್ಷಣವೇ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT