ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನಕ್ಕೆ ಉಪಾಧ್ಯಕ್ಷ ಹುದ್ದೆ ನೀಡಿದ ಒಐಸಿ

Last Updated 12 ಮಾರ್ಚ್ 2019, 20:14 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಇಸ್ಲಾಮಿಕ್ ಸಹಕಾರ ಸಂಸ್ಥೆಯ (ಒಐಸಿ) ಉಪಾಧ್ಯಕ್ಷ ಹುದ್ದೆಗೆ ಈ ಬಾರಿ ಪಾಕಿಸ್ತಾನವನ್ನು ಆಯ್ಕೆ ಮಾಡಲಾಗಿದೆ. ಬಹುಪಾಲು ಮುಸ್ಲಿಂ ಪಾಬಲ್ಯ ಇರುವ 57 ರಾಷ್ಟ್ರಗಳ ಒಕ್ಕೂಟವು ಪಾಕಿಸ್ತಾನಕ್ಕೆ ಉಪಾಧ್ಯಕ್ಷ ಹುದ್ದೆ ನೀಡಿದೆ.

ಮೊರಾಕ್ಕೊದ ರಾಬಾತ್‌ನಲ್ಲಿ ನಡೆದ ಒಐಸಿಯ ಸಾಮಾನ್ಯ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾಗಿ ಡಾನ್ ಪತ್ರಿಕೆ ವರದಿ ಮಾಡಿದೆ.

ಕಾಶ್ಮೀರಕ್ಕೆ ಸಂಬಂಧಿಸಿದ ಪಾಕಿಸ್ತಾನದ ಎರಡು ನಿರ್ಣಯಗಳನ್ನೂ ಒಐಸಿ ಸಮ್ಮೇಳನದಲ್ಲಿ ಮಂಡಿಸಲಾಗಿದೆ. 1999ರ ಜೂನ್ 17ರಂದು ಈ ಸಂಸ್ಥೆ ಅಸ್ತಿತ್ವಕ್ಕೆ ಬಂದಿದ್ದು, ಇದರ ಕೇಂದ್ರ ಕಚೇರಿ ಟೆಹರಾನ್‌ನಲ್ಲಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT