ಜೋಹಾನ್ಸ್ಬರ್ಗ್: ಕೊರೊನಾ ವೈರಸ್ನ ರೂಪಾಂತರ ತಳಿ ಓಮೈಕ್ರಾನ್ನಿಂದ 5 ವರ್ಷದ ಒಳಗಿನ ವಯಸ್ಸಿನ ಮಕ್ಕಳು ಆಸ್ಪತ್ರೆಗೆ ದಾಖಲಾಗುವುದು ಹೆಚ್ಚಾಗಿದೆ ಎಂದು ದಕ್ಷಿಣ ಆಫ್ರಿಕಾದ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಓಮೈಕ್ರಾನ್ನಿಂದಾಗಿ ದಕ್ಷಿಣ ಆಫ್ರಿಕಾದಲ್ಲೀಗ ದೃಢಪಡುತ್ತಿರುವ ಕೋವಿಡ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಿದೆ.

ಓದಿ:ಓಮೈಕ್ರಾನ್ ಪ್ರಸರಣ ತಡೆಗೆ ರಾಜ್ಯದಲ್ಲಿ ಹೊಸ ಮಾರ್ಗಸೂಚಿ: ಏನೇನಿದೆ?

‘ಕೋವಿಡ್ ನಾಲ್ಕನೇ ಅಲೆಯಲ್ಲಿ ಐದು ವರ್ಷದ ಒಳಗಿನ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ’ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ಕಳೆದ 7 ದಿನಗಳಲ್ಲಿ ಆಸ್ಪತ್ರೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ ಎಂದು ದಕ್ಷಿಣ ಆಫ್ರಿಕಾದ ಸಾಂಕ್ರಾಮಿಕ ರೋಗಗಳ ರಾಷ್ಟ್ರೀಯ ಸಂಸ್ಥೆ (ಎನ್ಐಸಿಡಿ) ಹೇಳಿದೆ.

ಒಟ್ಟಾರೆಯಾಗಿ ಆಸ್ಪತ್ರೆಗೆ ದಾಖಲಾಗುತ್ತಿರುವ ಮಕ್ಕಳ ಪೈಕಿ ಶೇ 10ರಷ್ಟು 2 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದಾರೆ ಎಂದು ಎನ್ಐಸಿಡಿಯ ಆರೋಗ್ಯ ತಜ್ಞರೊಬ್ಬರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.