ಇಸ್ಲಾಮಾಬಾದ್: ಪಾಕಿಸ್ತಾನದ ವಿರೋಧ ಪಕ್ಷದ ನಾಯಕ ಶಾಹಬಾಝ್ ಷರೀಫ್ ಅವರು ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಭಾನುವಾರ ಬೆಳಿಗ್ಗೆ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯದ ಮತದಾನದ ಮೂಲಕ ಪ್ರಧಾನಿ ಇಮ್ರಾನ್ ಖಾನ್ ಪದಚ್ಯುತಗೊಂಡರು. ಅವರ ಉತ್ತರಾಧಿಕಾರಿಯಾಗಿ ಮೂರು ಬಾರಿ ಪಾಕಿಸ್ತಾನದ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಅವರ ತಮ್ಮ ಶಾಹಬಾಝ್ ಇದೀಗ ಪಾಕಿಸ್ತಾನದ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಈ ಮಧ್ಯೆ ನೂತನ ಪ್ರಧಾನಿ ಆಯ್ಕೆ ಬಹಿಷ್ಕರಿಸಿದ್ದ ಇಮ್ರಾನ್ ಖಾನ್ ನೇತೃತ್ವದ ಪಿಟಿಐ (ಪಾಕಿಸ್ತಾನ್ ತೆಹ್ರಿಕ್ ಇ ಇನ್ಸಾಫ್) ಪಕ್ಷದ ಸಂಸದರು ರಾಜೀನಾಮೆ ನೀಡಿ ಸದನದಿಂದ ಹೊರ ನಡೆದರು.

ಈ ಮಧ್ಯೆ ನೂತನ ಪ್ರಧಾನಿ ಆಯ್ಕೆ ಬಹಿಷ್ಕರಿಸಿದ್ದ ಇಮ್ರಾನ್ ಖಾನ್ ನೇತೃತ್ವದ ಪಿಟಿಐ ಪಕ್ಷದ ಸಂಸದರು ರಾಜೀನಾಮೆ ನೀಡಿ ಸದನದಿಂದ ಹೊರ ನಡೆದರು.

ಇತ್ತೀಚೆಗೆ ವಿರೋಧ ಪಕ್ಷಗಳ ಜಂಟಿ ಸಭೆಯಲ್ಲಿ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ (ಪಿಪಿಪಿ) ಮುಖಂಡ ಮತ್ತು ಮಾಜಿ ಅಧ್ಯಕ್ಷ ಆಸಿಫ್ ಅಲಿ ಝರ್ದಾರಿ ಅವರು ಪ್ರಧಾನಿ ಸ್ಥಾನಕ್ಕೆ ಶಾಹಬಾಝ್ ಅವರ ಹೆಸರನ್ನು ಪ್ರಸ್ತಾಪಿಸಿದ್ದರು.

342 ಸದಸ್ಯ ಬಲದ ಸಂಸತ್ನಲ್ಲಿ ಭಾನುವಾರ ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯದ ಪರವಾಗಿ 174 ಮತಗಳು ಚಲಾವಣೆಗೊಂಡವು. ಇದರೊಂದಿಗೆ ಇಮ್ರಾನ್ ಪ್ರಧಾನಿ ಸ್ಥಾನದಿಂದ ಹೊರ ನಡೆಯಬೇಕಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.